Publish Date: Sun, 02 Jan 2022 (09:05 IST)
Updated Date: Sun, 02 Jan 2022 (09:29 IST)
ಹೈದರಾಬಾದ್: ರಾಜಮೌಳಿ ನಿರ್ದೇಶನದ ಜ್ಯೂ.ಎನ್ ಟಿಆರ್, ರಾಮ್ ಚರಣೆ ಪ್ರಮುಖ ಪಾತ್ರದಲ್ಲಿ ನಟಿಸಿರುವ ಬಹುನಿರೀಕ್ಷಿತ ಆರ್ ಆರ್ ಆರ್ ಸಿನಿಮಾ ರಿಲೀಸ್ ದಿನಾಂಕ ಮತ್ತೆ ಮುಂದೂಡಿಕೆಯಾಗಿದೆ.
ಚಿತ್ರ ಜನವರಿ 7 ರಂದು ಬಹುಭಾಷೆಗಳಲ್ಲಿ ತೆರೆಗೆ ಬರಬೇಕಿತ್ತು. ಇದಕ್ಕಾಗಿ ಈಗಾಗಲೇ ಚಿತ್ರತಂಡ ಭರದ ಪ್ರಚಾರ ನಡೆಸಿತ್ತು. ಆದರೆ ಈಗ ಕೊರೋನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಚಿತ್ರತಂಡ ರಿಲೀಸ್ ದಿನಾಂಕ ಮುಂದೂಡಲು ತೀರ್ಮಾನಿಸಿದೆ.
ದೆಹಲಿಯಲ್ಲಿ ಚಿತ್ರಮಂದಿರಗಳನ್ನು ಬಂದ್ ಮಾಡಲಾಗಿದ್ದರೆ, ತಮಿಳುನಾಡಿನಲ್ಲಿ ಶೇ.50 ಪ್ರೇಕ್ಷಕರಿಗೆ ಮಾತ್ರ ಅನುಮತಿ ನೀಡಲಾಗಿದೆ. ಪ್ರಕರಣಗಳ ಸಂಖ್ಯೆ ಹೆಚ್ಚಿದರೆ ಥಿಯೇಟರ್ ಮೇಲೆ ಹೆಚ್ಚಿನ ರಾಜ್ಯಗಳು ನಿರ್ಬಂಧ ವಿಧಿಸಬಹುದು. ಇಂತಹ ಸಂದರ್ಭದಲ್ಲಿ ಚಿತ್ರ ಬಿಡುಗಡೆ ಮಾಡಿದರೆ ದೊಡ್ಡ ಲಾಸ್ ಆಗೋದು ಗ್ಯಾರಂಟಿ. ಹೀಗಾಗಿ ದಿನಾಂಕ ಮುಂದೂಡಿಕೆಯಾಗಿದೆ.