Publish Date: Wed, 30 Jun 2021 (12:14 IST)
Updated Date: Wed, 30 Jun 2021 (09:56 IST)
ಹೈದರಾಬಾದ್: ಎಸ್. ರಾಜಮೌಳಿ ನಿರ್ದೇಶನದ, ಜ್ಯೂನಿಯರ್ ಎನ್ ಟಿಆರ್,ರಾಮ್ ಚರಣ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ಆರ್ ಆರ್ ಆರ್ ಸಿನಿಮಾ ಯಾವಾಗ ಎಂದು ಕಾಯುತ್ತಿದ್ದ ಅಭಿಮಾನಿಗಳಿಗೆ ಚಿತ್ರತಂಡ ಕೊನೆಗೂ ಗುಡ್ ನ್ಯೂಸ್ ಕೊಟ್ಟಿದೆ.
ತ್ರಿಬಲ್ ಆರ್ ಸಿನಿಮಾ ಅಕ್ಟೋಬರ್ 13 ಕ್ಕೆ ಬಿಡುಗಡೆಯಾಗುತ್ತದೆ ಎಂದು ಈ ಮೊದಲು ಸುದ್ದಿಯಾಗಿತ್ತು. ಆದರೆ ಕೊರೋನಾ ಕಾರಣದಿಂದ ಮುಂದಿನ ವರ್ಷಕ್ಕೆ ಬಿಡುಗಡೆಯಾಗಬಹುದು ಎಂಬ ಸುದ್ದಿ ಹಬ್ಬಿತ್ತು. ಈಗ ಈ ಎಲ್ಲಾ ಗೊಂದಲಗಳಿಗೆ ಸ್ವತಃ ಚಿತ್ರತಂಡವೇ ಸ್ಪಷ್ಟನೆ ನೀಡಿದೆ.
ಇದೇ ವರ್ಷ ಅಕ್ಟೋಬರ್ 13 ಕ್ಕೇ ಚಿತ್ರ ನಿಮ್ಮ ಮುಂದೆ ಬರುವುದು ಪಕ್ಕಾ ಎಂದು ಚಿತ್ರತಂಡ ಹೇಳಿದೆ. ಈಗಾಗಲೇ ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳು ಭರದಿಂದ ಸಾಗುತ್ತಿದೆ. ಇದೀಗ ಚಿತ್ರತಂಡ ನೀಡಿರುವ ಸುದ್ದಿಯಿಂದ ಅಭಿಮಾನಿಗಳು ಖುಷಿಯಾಗಿದ್ದಾರೆ.