Webdunia - Bharat's app for daily news and videos

Install App

ನಟ ಪ್ರಜ್ವಲ್ ದೇವರಾಜ್ ಇನ್ನಿಲ್ಲ ಎಂದು ವದಂತಿ

Krishnaveni K
ಗುರುವಾರ, 30 ಮೇ 2024 (15:48 IST)
ಬೆಂಗಳೂರು: ಸ್ಯಾಂಡಲ್ ವುಡ್ ನಟರ ಸಾವಿನ ವದಂತಿ ಹಬ್ಬುವುದು ಇದೇ ಮೊದಲಲ್ಲ. ಇದೀಗ ನಟ ಪ್ರಜ್ವಲ್ ದೇವರಾಜ್ ಅವರ ಬಗ್ಗೆ ಇಂತಹದ್ದೊಂದು ವದಂತಿ ಹರಿಯಬಿಡಲಾಗಿದ್ದು, ಕುಟುಂಬಸ್ಥರು ಬೇಸರಗೊಂಡಿದ್ದಾರೆ.

ಸ್ಯಾಂಡಲ್ ವುಡ್ ನಟ ಪ್ರಜ್ವಲ್ ದೇವರಾಜ್ ಇನ್ನಿಲ್ಲ ಎಂದು ಯಾರೋ ಕಿಡಿಗೇಡಿಗಳು ಸೋಷಿಯಲ್ ಮೀಡಿಯಾದಲ್ಲಿ ಸುದ್ದಿ ಹಬ್ಬಿಸಿದ್ದರು. ಇದರಿಂದ ಅಭಿಮಾನಿಗಳು ಆತಂಕಕ್ಕೀಡಾದರು. ಕೆಲವೇ ಕ್ಷಣಗಳಲ್ಲಿ ಈ ಸುದ್ದಿ ವೈರಲ್ ಆಗುತ್ತಿದ್ದಂತೇ ಕುಟುಂಬಸ್ಥರು ಬೇಸರ ವ್ಯಕ್ತಪಡಿಸಿದ್ದಾರೆ.

ಆರೋಗ್ಯವಾಗಿರುವ ನಟನ ಬಗ್ಗೆ ಇಂತಹದ್ದೊಂದು ಸುದ್ದಿ, ಫೋಟೋ ಹಂಚುತ್ತಿರುವ ಬಗ್ಗೆ ಕುಟುಂಬಸ್ಥರು ಬೇಸರಗೊಂಡಿದ್ದು, ಕಾನೂನು ಕ್ರಮ ಕೈಗೊಳ್ಳಲು ಚಿಂತನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರಜ್ವಲ್ ಆಪ್ತರು ವದಂತಿಗಳಿಗೆ ಕಿವಿಗೊಡಬೇಡಿ. ಪ್ರಜ್ವಲ್ ಆರೋಗ್ಯವಾಗಿದ್ದಾರೆ ಎಂದಿದ್ದಾರೆ.

ಸ್ಯಾಂಡಲ್ ವುಡ್ ನಲ್ಲಿ ಈ ರೀತಿ ಅನೇಕ ಬಾರಿ ಹಿರಿಯ ನಟರ ಬಗ್ಗೆ ಸಾವಿನ ವದಂತಿ ಹರಡಿರುವ ಘಟನೆಗಳು ನಡೆದಿದ್ದವು. ಆದರೆ ಆರೋಗ್ಯವಾಗಿರುವ ಚಿಕ್ಕವಯಸ್ಸಿನ ನಟನ ಬಗ್ಗೆ ಇಂತಹದ್ದೊಂದು ವದಂತಿ ಹರಡಿರುವುದು ಅವರ ಕುಟುಂಬದವರಿಗೆ ನೋವುಂಟುಮಾಡಿದೆ.

ಪ್ರಜ್ವಲ್ ದೇವರಾಜ್ ಹಿರಿಯ ನಟ ದೇವರಾಜ್ ಪುತ್ರ. ಈ ವರ್ಷ ಹಲವು ಸಿನಿಮಾಗಳಲ್ಲಿ ಪ್ರಜ್ವಲ್ ನಟಿಸುತ್ತಿದ್ದಾರೆ. ಗಣ, ಮಾಫಿಯಾ, ಕರಾವಳಿ ಮುಂತಾದ ನಾಲ್ಕೈದು ಸಿನಿಮಾಗಳು ಅವರ ಕೈಯಲ್ಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments