ಬೆಂಗಳೂರು: ನಿನ್ನೆ ಪತ್ನಿ ಜತೆ 22ನೇ ವರ್ಷದ ಮದುವೆ ವಾರ್ಷಿಕೋತ್ಸವವನ್ನು ಆಚರಿಸಿಕೊಂಡ ನಟ ದರ್ಶನ್‌ಗೆ ದುಃಖದ ನ್ಯೂಸ್ ಎದುರಾಗಿದೆ.
ನಟ ದರ್ಶನ್ ಅವರು ತಮ್ಮ ಆಪ್ತ ವಲಯದಲ್ಲಿ ಗುರುತಿಸಕೊಂಡಿದ್ದ ಹಾಗೂ ಅವರೊಂದಿಗೆ 25ವರ್ಷಗಳಿಂದ ಕೆಲಸ ಮಾಡುತ್ತಿದ್ದ ಆತ್ಮೀಯನನ್ನು ಕಳೆದುಕೊಂಡಿದ್ದಾರೆ. ಈ ವಿಷಯವನ್ನು ನಟ ದರ್ಶನ್ ಅವರೇ ತಮ್ಮ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
25ವರ್ಷಗಳಿಂದ ನನ್ನೊಂದಿಗೆ ಕೆಲಸಮಾಡಿದ ಪ್ರಿಯ ಮೇಕಪ್ ಆರ್ಟಿಸ್ಟ್ ಹೊನ್ನೆ ಗೌಡ್ರು ಇಂದು ಅಗಲಿದ ಸುದ್ದಿ ನಮ್ಮೆಲ್ಲರನ್ನು ಶೋಕದಲ್ಲಿ ಮುಳುಗಿಸಿದೆ. ಅವರ ಕಲೆ, ನಿಷ್ಠೆ ಮತ್ತು ನಗುಮೊಗದ ಸೇವೆಯನ್ನು ಎಂದಿಗೂ ಮರೆಯಲಾಗದು. ಈ ದುಃಖದ ಸಮಯದಲ್ಲಿ ದೇವರು ಅವರ ಕುಟುಂಬಕ್ಕೆ ನೋವನ್ನು ನುಂಗುಚ ಶಕ್ತಿ ನೀಡಲಿ. ಹೊನ್ನೆ ಗೌಡರ ಆತ್ಮಕ್ಕೆ ಶಾಂತಿ ದೊರೆಯಲಿ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ.