Webdunia - Bharat's app for daily news and videos

Install App

ಕ್ರಿಶ್ಚಿಯನ್ ಸಮುದಾಯದವರಿರುವ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಗೆ ಸಾಧುಕೋಕಿಲಾ ಬೇಡಿಕೆ

Krishnaveni K
ಮಂಗಳವಾರ, 12 ಮಾರ್ಚ್ 2024 (09:05 IST)
Photo Courtesy: Twitter
ಬೆಂಗಳೂರು: ಕನ್ನಡ ಚಿತ್ರರಂಗದ ಖ್ಯಾತ ಹಾಸ್ಯನಟ, ನಿರ್ದೇಶಕ ಸಾಧುಕೋಕಿಲ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸುವ ಇರಾದೆ ವ್ಯಕ್ತಪಡಿಸಿದ್ದಾರೆ.

ಸಾಧುಕೋಕಿಲ ಮೂಲತಃ ಕ್ರಿಶ್ಚಿಯನ್ ಧರ್ಮ ಅನುಸರಿಸುತ್ತಾರೆ. ಹೀಗಾಗಿ ಇದೇ ಧರ್ಮದವರು ಹೆಚ್ಚಿರುವ ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಸಾಧುಕೋಕಿಲಗೆ ಟಿಕೆಟ್ ನೀಡುವಂತೆ ಕ್ರಿಶ್ಚಿಯನ್ ಸಮುದಾಯ ಕಾಂಗ್ರೆಸ್ ನಾಯಕರಿಗೆ ಬೇಡಿಕೆಯಿಟ್ಟಿದ್ದಾರೆ.  ಅವಕಾಶ ಕೊಟ್ಟರೆ ಚುನಾವಣೆಗೆ ಕಾಂಗ್ರೆಸ್ ನಿಂದ ಸ್ಪರ್ಧಿಸುವುದಾಗಿ ಸಾಧುಕೋಕಿಲ ಕೂಡಾ ಹೇಳಿದ್ದಾರೆ.

ಈ ಮೊದಲು ಬಿಜೆಪಿ ಸರ್ಕಾರದ ಅವಧಿಯಲ್ಲಿ ಕಾಂಗ್ರೆಸ್ ನಾಯಕರು ಸಮಾವೇಶ, ರಾಹುಲ್ ಭಾರತ್ ಝೋಡೋ ಯಾತ್ರೆ ಮಾಡಿದ್ದಾಗ ಸಾಧುಕೋಕಿಲ ಕೂಡಾ ಪಾಲ್ಗೊಂಡಿದ್ದರು. ಇದೀಗ ಬೆಂಗಳೂರು ಸೆಂಟ್ರಲ್ ನಲ್ಲಿ 15 ಲಕ್ಷ ಕ್ರಿಶ್ಚಿಯನ್ ಸಮುದಾಯದವರಿದ್ದು, ಸಾಧುಕೋಕಿಲಗೆ ಟಿಕೆಟ್ ನೀಡುವಂತೆ ಒತ್ತಾಯ ಕೇಳಿಬಂದಿದೆ.

ಆದರೆ ನಾನು ಯಾವುದೇ ಧರ್ಮಕ್ಕೆ ಸೇರಿದವನಾಗಲು ಬಯಸುವುದಿಲ್ಲ. ನಾನು ಎಲ್ಲಾ ಸಮುದಾಯದವರೊಂದಿಗೆ ಗುರುತಿಸಲು ಬಯಸುತ್ತೇನೆ. ನನ್ನ ಹಿನ್ನಲೆ ಎಲ್ಲರಿಗೂ ಗೊತ್ತಿದೆ. ನನ್ನನ್ನು ಎಲ್ಲಾ ಸಮುದಾಯದವರು ಗುರುತಿಸುತ್ತಾರೆ. ಹೀಗಾಗಿ ಟಿಕೆಟ್ ಕೊಟ್ಟರೆ ಸ್ಪರ್ಧಿಸಲು ರೆಡಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments