ಅಮೇಜಾನ್‌ ಪ್ರೈಮ್‌ನಲ್ಲಿ ಸದ್ದು ಮಾಡುತ್ತಿದೆ ಶಾಖಾಹಾರಿ: ನಾಲ್ಕು ದಿನದಲ್ಲಿ ದಾಖಲೆಯ ವೀಕ್ಷಣೆ

sampriya
ಬುಧವಾರ, 29 ಮೇ 2024 (17:59 IST)
Photo By Instagram
ಬೆಂಗಳೂರು: ಇದೇ ವರ್ಷ ಫೆಬ್ರವರಿ 16ರಂದು ಬೆಳ್ಳಿಪರದೆಗೆ ಎಂಟ್ರಿ ಕೊಟ್ಟಿದ್ದ ಶಾಖಾಹಾರಿ ಸಿನಿಮಾವೀಗ ಮೂರು ತಿಂಗಳ ಬಳಿಕ ಒಟಿಟಿಗೆ ಲಗ್ಗೆ ಇಟ್ಟಿದೆ. ಅಮೇಜಾನ್‌ ಪ್ರೈಮ್‌ನಲ್ಲಿ ಬಿಡುಗಡೆಯಾದ ಈ ಚಿತ್ರಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಶಾಖಾಹಾರಿ ಚಿತ್ರವನ್ನು ನೋಡಿದವರೆಲ್ಲಾ ಇಂತಹ ಸಿನಿಮಾವನ್ನು ಥಿಯೇಟರ್ ನಲ್ಲಿ ನೋಡಿಲ್ಲವಲ್ಲ ಎಂದು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಈ ಚಿತ್ರಕ್ಕೆ ಚಿತ್ರಮಂದಿರದಲ್ಲಿ ದೊಡ್ಡ ಯಶಸ್ಸು ಸಿಕ್ಕಿರಲಿಲ್ಲ.

ಅಮೇಜಾನ್ ಪ್ರೈಮ್ ನಲ್ಲಿ ಸ್ಕ್ರೀಮ್ ಆಗಿರುವ ಈ ಚಿತ್ರವನ್ನು ನೋಡಿದವರೆಲ್ಲಾ ವಾವ್ ಇಂತಹ ಪ್ರಯತ್ನಗಳು ಮಾಲಿವುಡ್‌ನಲ್ಲಿ ಮಾತ್ರವಲ್ಲ ನಮ್ಮಲ್ಲಿಯೂ ನಡೆಯುತ್ತವೆ ಎನ್ನುತ್ತಿದ್ದಾರೆ. ಅಮೇಜಾನ್ ಪ್ರೈಮ್‌ಗೆ ಎಂಟ್ರಿ ಕೊಟ್ಟ ಬರೀ 4 ದಿನದಲ್ಲಿ 10 ಮಿಲಿಯನ್ ನಿಮಿಷಗಳ ಸ್ಟ್ರೀಮಿಂಗ್ ಕಂಡಿರುವ ಸಿನಿಮಾ ಎಲ್ಲರ ಮೆಚ್ಚುಗೆ ಪಾತ್ರವಾಗಿದೆ.

ಸಂದೀಪ್ ಸುಂಕದ್ ನಿರ್ದೇಶನದ ಶಾಖಾಹಾರಿ ಸಿನಿಮಾದ ಸೂತ್ರಧಾರಿ. ಕನ್ನಡ ಚಿತ್ರರಂಗದ ಹಿರಿಯ ನಟ ರಂಗಾಯಣ ರಘು ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದರು. ಪೊಲೀಸ್ ಅಧಿಕಾರಿಯಾಗಿ ಗೋಪಾಲಕೃಷ್ಣ ದೇಶಪಾಂಡೆ ಅತ್ಯದ್ಬುತವಾಗಿ ನಟಿಸಿದ್ದರು. ಉಳಿದಂತೆ ವಿನಯ್, ನಿಧಿ ಹೆಗಡೆ, ಸುಜಯ್ ಶಾಸ್ತ್ರೀ, ಹರಿಣಿ ಹಾಗೂ ಕಾನ್‌ಸ್ಟೇಬಲ್ ಮಮತಕ್ಕನ ಪಾತ್ರಧಾರಿಯಾಗಿ ಪ್ರತಿಭಾ ನಾಯಕ್ ತಮ್ಮ ಪಾತ್ರಗಳಿಗೆ ನ್ಯಾಯ ಸಲ್ಲಿಸಿದ್ದಾರೆ.

ಶಿವಮೊಗ್ಗದ ತೀರ್ಥಹಳ್ಳಿಯ ಹಳ್ಳಿಯೊಂದರಲ್ಲಿ ನಡೆಯುವ ರೋಚಕ ಕಥೆಯೇ ಶಾಖಾಹಾರಿ. ಅಲ್ಲಿ ನಡೆಯುವ ಕೆಲ ಘಟನೆಗಳನ್ನು ಆಧರಿಸಿ ಚಿತ್ರಕಥೆಯನ್ನು ಹೆಣೆಯಲಾಗಿದ್ದು, ಪ್ರೇಕ್ಷಕರಿಗೆ ಇಷ್ಟವಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಂಧನಕ್ಕೊಳಗಾದ ನೀಲಿ ತಾರೆ, ಓನ್ಲಿ ಫ್ಯಾನ್ಸ್ ಸ್ಟಾರ್ ಬೋನಿ, ಆರೋಪ ಸಾಬೀತಾದಲ್ಲಿ 15ವರ್ಷ ಜೈಲೂಟ

ಮಗುವಿನ ಆಗಮನದ ಖುಷಿಯಲ್ಲಿ ಪ್ಯಾಟೆ ಹುಡುಗಿ ಹಳ್ಳಿ ಲೈಫ್‌ನ ಸುಷ್ಮಾ ರಾಜ್‌

ರಿಷಬ್ ಕಾಲ ಮೇಲೆ ಮಲಗಿದ್ದು ದೈವವಲ್ಲ ಬದಲಾಗಿ ನರ್ತಕ, ಭಾರೀ ಟೀಕೆ

ಅಪ್ಪ ಇಲ್ಲದಿದ್ದರು, 90ನೇ ವರ್ಷದ ಹುಟ್ಟುಹಬ್ಬವನ್ನು ವಿಶೇಷವಾಗಿ ಆಚರಿಸಿದ ಧರ್ಮೇಂದ್ರ ಮಕ್ಕಳು

ದಿಲೀಪ್ ಪರ ತೀರ್ಪು ಹೊರಬೀಳುತ್ತಿದ್ದ ಹಾಗೇ ವಾವ್ಹ್‌ ಜಸ್ಟ್‌ ವಾವ್ಹ್‌ ಎಂದ ಗಾಯಕಿ

ಮುಂದಿನ ಸುದ್ದಿ
Show comments