ಸಂಚಾರಿ ವಿಜಯ್ ಬದುಕುವ ಸಾಧ್ಯತೆ ಕಡಿಮೆ: ಅಂಗಾಂಗ ದಾನ ಮಾಡಲು ನಿರ್ಧರಿಸಿದ ಕುಟುಂಬ

Webdunia
ಸೋಮವಾರ, 14 ಜೂನ್ 2021 (11:37 IST)
ಬೆಂಗಳೂರು: ರಸ್ತೆ ಅಪಘಾತದಲ್ಲಿ ತೀವ್ರ ಗಾಯಮಾಡಿಕೊಂಡಿರುವ ನಟ ಸಂಚಾರಿ ವಿಜಯ್ ಆರೋಗ್ಯ ಸ್ಥಿತಿ ಬಗ್ಗೆ ಅಪೋಲೋ ಆಸ್ಪತ್ರೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿದೆ. ಅವರು ಬದುಕುಳಿಯುವ ಸಾಧ‍್ಯತೆ ಕಡಿಮೆ ಎಂದು ವೈದ್ಯರು ಹೇಳಿದ್ದಾರೆ.


ವಿಜಯ್ ಮೆದುಳಿಗೆ ಪೆಟ್ಟು ಮಾಡಿಕೊಂಡಿದ್ದು, ಶಸ್ತ್ರಚಿಕಿತ್ಸೆ ನಡೆಸಲಾಗಿದೆ. ಆದರೆ ಅವರಿನ್ನೂ ಕೋಮಾ ಸ್ಥಿತಿಯಲ್ಲೇ ಇದ್ದಾರೆ. ಅವರ ಸ್ಥಿತಿಗತಿ ಸದ್ಯಕ್ಕೆ ಗಂಭೀರವಾಗಿದ್ದು, ಜೀವರಕ್ಷಕ ಅಳವಡಿಸಲಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ. ಅರುಣ್ ನಾಯಕ್ ಹೇಳಿದ್ದಾರೆ.

ಅವರ ದೇಹದ ಇತರ ಭಾಗ ನಾರ್ಮಲ್ ಆಗಿದೆ. ಆದರೆ ಮೆದುಳಿಗೆ ತೀವ್ರ ಪೆಟ್ಟು ಬಿದ್ದಿರುವ ಕಾರಣ ಮೆದುಳಿನ ಊತ ಕಡಿಮೆಯಾಗುತ್ತಿಲ್ಲ. ಇದೇ ರೀತಿ ಮುಂದುವರಿದರೆ ಬ್ರೈನ್ ಫೈಲ್ಯೂರ್ ಆಗಬಹುದು. ಬಿದ್ದಿರುವ ರಭಸಕ್ಕೆ ಅವರ ತಲೆಬುರುಡೆಯೂ ಫ್ರ್ಯಾಕ್ಚರ್ ಆಗಿದೆ. ಉಸಿರಾಡ್ತಾ ಇದ್ದಾರೆ. ಆದರೆ ರಿಕವರಿ ಚಾನ್ಸ್ ಕಡಿಮೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ಅರುಣ್ ನಾಯಕ್ ಹೇಳಿದ್ದಾರೆ.

ಅವರು ಗುಣಮುಖರಾಗುವ ಸಾಧ್ಯತೆ ಕಡಿಮೆ. ವಿಜಯ್ ಯಾವತ್ತೂ ಸಮಾಜಮುಖೀ ಕೆಲಸ ಮಾಡುತ್ತಿದ್ದವನು. ಹೀಗಾಗಿ ಅವನ ದೇಹವೂ ಸಮಾಜದ ಒಳಿತಿಗಾಗಿ ಬಳಕೆಯಾಗಲಿ ಎಂದು ಅವನ ಅಂಗಾಂಗ ದಾನ ಮಾಡಲು ನಿರ್ಧರಿಸಿದ್ದೇವೆ ಎಂದು ಸಹೋದರ ಸಿದ್ಧೇಶ್ ಕಣ್ಣೀರು ಹಾಕುತ್ತಲೇ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಚಾಪ್ಟರ್ 1 ದೊಡ್ಡ ಪರದೆಯಲ್ಲಿ ಸಿನಿಮಾ ನೋಡದವರಿಗೆ ಇಲ್ಲಿದೆ ಗುಡ್‌ನ್ಯೂಸ್‌

ಏಕಾಏಕಿ ಠಾಣೆ ಮೆಟ್ಟಿಲೇರಿದ ಖ್ಯಾತ ನಟ ಚಿರಂಜೀವಿ, ಆಗಿದ್ದೇನು ಗೊತ್ತಾ

BB Season 12, ದೊಡ್ಮನೆಯಲ್ಲಿ ಈ ಜೋಡಿ ಲವ್‌ ಸ್ಟೋರಿ ಭಾರೀ ಇರಿಟೇಶನ್ ಎಂದ ನೆಟ್ಟಿಗರು

Kurnool Bus Tragedy: ಆ ಜೀವಗಳು ಅದೆಷ್ಟೂ ನೋವು ಅನುಭವಿಸರಬೇಕು: ರಶ್ಮಿಕಾ ಮಂದಣ್ಣ ಕಂಬನಿ

BBK12: ಕಿಚ್ಚ ಸುದೀಪ್ ಹೇಳಿದ್ರೂಂತ ಡ್ರಾಮಾ ಮಾಡ್ತಿದ್ದಾರಾ ಅಶ್ವಿನಿ, ಜಾನ್ವಿ

ಮುಂದಿನ ಸುದ್ದಿ
Show comments