Publish Date: Tue, 15 Jun 2021 (09:02 IST)
Updated Date: Tue, 15 Jun 2021 (09:09 IST)
ಬೆಂಗಳೂರು: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡು ಬ್ರೈನ್ ಡೆಡ್ ಆಗಿ ಸಾವನ್ನಪ್ಪಿದ ನಟ ಸಂಚಾರಿ ವಿಜಯ್ ರ ಅಂತ್ಯಕ್ರಿಯೆ ಇಂದು ಹುಟ್ಟೂರು ಚಿಕ್ಕಮಗಳೂರು ಜಿಲ್ಲೆಯ ಕಡೂರಿನ ಪಂಚನಹಳ್ಳಿಯಲ್ಲಿ ನೆರವೇರಲಿದೆ.
ರಾಷ್ಟ್ರಪ್ರಶಸ್ತಿ ವಿಜೇತ ನಟನಿಗೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತಿಮ ವಿದಾಯ ಹೇಳಲಾಗುತ್ತದೆ. ಈಗಾಗಲೇ ಕುಟುಂಬಸ್ಥರು ಹುಟ್ಟೂರಿನಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ ಮಾಡಿಕೊಂಡಿದ್ದಾರೆ.
ಇದೀಗ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಕೆಲವೇ ಸಮಯದ ಬಳಿಕ ಅಲ್ಲಿಂದ ಪಾರ್ಥಿವ ಶರೀರವನ್ನು ಪಂಚನಹಳ್ಳಿಗೆ ಕರೆದೊಯ್ಯಲಾಗುತ್ತದೆ. ಕೊರೋನಾ ನಿಯಮದ ಪ್ರಕಾರ ಅಂತ್ಯಕ್ರಿಯೆಗೆ ಕೇವಲ 25 ಜನರಿಗೆ ಮಾತ್ರ ಅವಕಾಶ ಕಲ್ಪಿಸಲಾಗುತ್ತದೆ.