ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ನಟ ಲೋಹಿತಾಶ್ವ ಹೃದಯಾಘಾತಕ್ಕೊಳಗಾಗಿದ್ದು ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ಅವರು ಹೃದಯಾಘಾತಕ್ಕೊಳಗಾಗಿದ್ದು ಗಂಭೀರ ಸ್ಥಿತಿಯಲ್ಲಿದ್ದಾರೆ ಎಂದು ತಿಳಿದುಬಂದಿದೆ. ಇದೀಗ ಅವರನ್ನು ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸದ್ಯಕ್ಕೆ ಅವರನ್ನು ಐಸಿಯುವಿನಲ್ಲಿರಿಸಲಾಗಿದ್ದು, ಅವರ ಆರೋಗ್ಯದ ಬಗ್ಗೆ ಸದ್ಯಕ್ಕೆ ಏನೂ ಹೇಳುವ ಸ್ಥಿತಿಯಲ್ಲಿಲ್ಲ ಎಂದು ವೈದ್ಯರು ತಿಳಿಸಿದ್ದಾರೆ. ಲೋಹಿತಾಶ್ವ ಅವರು ಸುಮಾರು 500 ಕ್ಕೂ ಹೆಚ್ಚು ಕನ್ನಡ ಸಿನಿಮಾಗಳಲ್ಲಿ ಪೋಷಕ ನಟರಾಗಿ ನಟಿಸಿದ್ದರು. ಅವರ ಪುತ್ರ ಶರತ್ ಲೋಹಿತಾಶ್ವ ಕೂಡಾ ಕನ್ನಡದ ಪ್ರತಿಭಾವಂತ ನಟರು.
-Edited by Rajesh Patil