Publish Date: Sat, 07 May 2022 (10:03 IST)
Updated Date: Sat, 07 May 2022 (10:05 IST)
ಬೆಂಗಳೂರು: ಸ್ಯಾಂಡಲ್ ವುಡ್ ನ ಜನಪ್ರಿಯ ಹಾಸ್ಯ ನಟ ಮೋಹನ್ ಜುನೇಜ ಅನಾರೋಗ್ಯದಿಂದ ನಿಧನರಾಗಿದ್ದಾರೆ.
ಲಿವರ್ ಸಮಸ್ಯೆಯಿಂದ ಬಳಲುತ್ತಿದ್ದ ಮೋಹನ್ ನಿನ್ನೆ ರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
ಕೆಜಿಎಫ್, ನವಗ್ರಹ ಸೇರಿದಂತೆ 20 ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅವರು ನಟಿಸಿದ್ದರು. ಇದಲ್ಲದೆ ಕಿರುತೆರೆಯಲ್ಲೂ ನಟಿಸಿದ್ದಾರೆ. ಮೋಹನ್ ನಿಧನಕ್ಕೆ ಸ್ಯಾಂಡಲ್ ವುಡ್ ಕಂಬನಿ ಮಿಡಿದಿದೆ.