Select Your Language

Notifications

webdunia
webdunia
webdunia
webdunia

ಸ್ಯಾಂಡಲ್ ವುಡ್ ಯುವ ನಟ ಸಂತೋಷ್ ಬಾಲರಾಜ್ ನಿಧನ

Santhosh Balaraj

Krishnaveni K

ಬೆಂಗಳೂರು , ಮಂಗಳವಾರ, 5 ಆಗಸ್ಟ್ 2025 (11:32 IST)
Photo Credit: X
ಬೆಂಗಳೂರು: ಸ್ಯಾಂಡಲ್ ವುಡ್ ನ ಯುವ ನಾಯಕ ನಟ ಸಂತೋಷ್ ಬಾಲರಾಜ್ ಅನಾರೋಗ್ಯದಿಂದಾಗಿ ಚಿಕಿತ್ಸೆಎ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಬನಶಂಕರಿಯ ಸಾಗರ್ ಅಪೋಲೋ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಅವರಿಗೆ ಕೇವಲ 38 ವರ್ಷ ವಯಸ್ಸಾಗಿತ್ತು.

ಜಾಂಡೀಸ್ ಖಾಯಿಲೆ ಬಂದಿತ್ತು ಎನ್ನಲಾಗಿದೆ. ಇದರಿಂದಾಗಿ ಅವರಿಗೆ ಕಿಡ್ನಿ ಮತ್ತು ಯಕೃತ್ ಗೆ ತೀವ್ರ ಹಾನಿಯಾಗಿತ್ತು. ಗಂಭೀರ ಸ್ಥಿತಿಯಲ್ಲಿದ್ದ ಅವರನ್ನು ಐಸಿಯುವಿನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಕೊನೆಗೂ ಚಿಕಿತ್ಸೆ ಫಲಕಾರಿಯಾಗಲೇ ಇಲ್ಲ.

ಕರಿಯ 2, ಗಣಪ ಸೇರಿದಂತೆ ಸ್ಯಾಂಡಲ್ ವುಡ್ ನಲ್ಲಿ ಕೆಲವು ಚಿತ್ರಗಳಲ್ಲಿ ಅವರು ಅಭಿನಯಿಸಿದ್ದರು. ಸಿನಿಮಾದಲ್ಲಿ ಇನ್ನೂ ಹೇಳಿಕೊಳ್ಳುವಂತಹ ಬ್ರೇಕ್ ಸಿಕ್ಕಿರಲಿಲ್ಲ. ಇನ್ನೂ ಅವಿವಾಹಿತರಾಗಿದ್ದ ಅವರು ತಂದೆ-ತಾಯಿ ಮತ್ತು ಸಹೋದರಿಯನ್ನು ಅಗಲಿದ್ದಾರೆ.


Share this Story:

Follow Webdunia kannada

ಮುಂದಿನ ಸುದ್ದಿ

ಶೆಟ್ಟಿ ಗ್ಯಾಂಗ್ ಎಂದವರಿಗೆ ರಾಜ್ ಬಿ ಶೆಟ್ಟಿ ಹೇಳಿದ್ದೇನು ಗೊತ್ತಾ