Select Your Language

Notifications

webdunia
webdunia
webdunia
webdunia

Sarigama Viji: ಸ್ಯಾಂಡಲ್ ವುಡ್ ಹಿರಿಯ ನಟ ಸರಿಗಮ ವಿಜಿ ಇನ್ನಿಲ್ಲ

Sarigama Viji

Krishnaveni K

ಬೆಂಗಳೂರು , ಬುಧವಾರ, 15 ಜನವರಿ 2025 (11:22 IST)
Photo Credit: X
ಬೆಂಗಳೂರು: ಸ್ಯಾಂಡಲ್ ವುಡ್ ಹಿರಿಯ ಪೋಷಕ ನಟ ಸರಿಗಮ  ವಿಜಿ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 76 ವರ್ಷ ವಯಸ್ಸಾಗಿತ್ತು.

ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ನಾಲ್ಕೈದು ದಿನಗಳಿಂದ ಅವರ ಆರೋಗ್ಯ ಗಂಭೀರ ಸ್ಥಿತಿಯಲ್ಲಿತ್ತು.

ಇಂದು ಬೆಳಿಗ್ಗೆ 9.45 ಕ್ಕೆ ನಿಧನರಾಗಿದ್ದಾರೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ. ಅವರು ಆಸ್ಪತ್ರೆಗೆ ದಾಖಲಾದ ಸಂದರ್ಭದಲ್ಲಿ ಹಲವು ನಟ-ನಟಿಯರು ಆಸ್ಪತ್ರೆಗೆ ಬಂದು ಆರೋಗ್ಯ ವಿಚಾರಿಸಿದ್ದರು. ಅವರು ಗುಣಮುಖರಾಗುತ್ತಿದ್ದಾರೆ ಎಂದು ಅವರ ಪುತ್ರ ಮಾಧ್ಯಮಗಳಿಗೆ ತಿಳಿಸಿದ್ದರು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಸಾವನ್ನಪ್ಪಿದ್ದಾರೆ. ಇಬ್ಬರು ಮಕ್ಕಳನ್ನು ಅವರು ಅಗಲಿದ್ದಾರೆ. ಇಂದು ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತಿದ್ದು, ನಾಳೆ ಮಧ್ಯಾಹ್ನ ಚಾಮರಾಜಪೇಟೆಯ ಟಿಆರ್ ಮಿಲ್ ಬಳಿಯಿರುವ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ. ಅವರ ನಿಧನಕ್ಕೆ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ. ರಂಗಭೂಮಿ, ಸಿನಿಮಾ, ಕಿರುತೆರೆ ಸೇರಿದಂತೆ ಎಲ್ಲಾ ರಂಗದಲ್ಲೂ ಕೆಲಸ ಮಾಡಿದ ಅನುಭವಿ. ಕನ್ನಡ ಚಿತ್ರರಂಗದಲ್ಲಿ ಸುಮಾರು 250 ಕ್ಕೂ ಚಿತ್ರಗಳಲ್ಲಿ ನಟಿಸಿದ್ದರು. ವಿಶೇಷವಾಗಿ ಟೈಗರ್ ಪ್ರಭಾಕರ್ ಸಿನಿಮಾಗಳಲ್ಲಿ ಪೋಷಕ ನಟನಾಗಿ ಅವರಿಗೆ ಒಂದು ಪಾತ್ರ ಇದ್ದೇ ಇರುತ್ತಿತ್ತು.


Share this Story:

Follow Webdunia kannada

ಮುಂದಿನ ಸುದ್ದಿ

BBK11: ಏನೇ ಲೆಕ್ಕಾಚಾರ ಮಾಡಿದ್ರೂ ಈ ಬಾರಿಯೂ ಬಿಗ್ ಬಾಸ್ ಗೆಲ್ಲೋದು ಗಂಡಮಕ್ಳೇ