Publish Date: Tue, 30 May 2017 (12:07 IST)
Updated Date: Tue, 30 May 2017 (12:10 IST)
ಬೆಂಗಳೂರು: ಕನ್ನಡ ಚಿತ್ರರಂಗದ ಯುವನಟ, ಯುಗಪುರುಷ ಚಿತ್ರದ ನಾಯಕ ಅರ್ಜುನ್ ದೇವ್ ಕಾರಿನ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿ ಪರಾರಿಯಾಗಿದ್ದಾರೆ.
ರಾಮನಗರ ಜಿಲ್ಲಾ ಕೋರ್ಟ್ ಮುಂಭಾಗದಲ್ಲೇ ಘಟನೆ ನಡೆದಿದೆ. ಪ್ರಕರಣವೊಂದರ ಸಂಬಂಧ ನ್ಯಾಯಾಲಯಕ್ಕೆ ಬಂದಿದ್ದ ಅರ್ಜುನ್ ಕಾರು ನಿಲ್ಲಿಸ ಫೋನ್ ನಲ್ಲಿ ಮಾತನಾಡುತ್ತಿದ್ದಾಗ ಇದ್ದಕ್ಕಿದ್ದಂತೆ ಬೈಕ್ ನಲ್ಲಿ ಬಂದ ಇಬ್ಬರು ಮುಸುಕುಧಾರಿಗಳು ಕಾರಿನ ಗಾಜು ಒಡೆದು ಎಚ್ಚರಿಕೆ ನೀಡಿ ಪರಾರಿಯಾಗಿದ್ದಾರೆ.
ದುಷ್ಕರ್ಮಿಗಳ ಕೈಯಲ್ಲಿ ಗನ್ ಇತ್ತು ಎಂದು ಅರ್ಜುನ್ ವಿವರಿಸಿದ್ದಾರೆ. ಈ ಬಗ್ಗೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆದರೆ ತನಗೆ ಯಾರೂ ಶತ್ರುಗಳಿಲ್ಲ. ಯಾವ ಕಾರಣಕ್ಕೆ ದುಷ್ಕರ್ಮಿಗಳು ತನ್ನ ಮೇಲೆ ಬೆದರಿಕೆ ಹಾಕಿದರು ಎಂದು ಗೊತ್ತಿಲ್ಲ ಎಂದು ಅರ್ಜುನ್ ಮಾಧ್ಯಮಗಳ ಮುಂದೆ ಹೇಳಿಕೊಂಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ