Publish Date: Tue, 24 May 2022 (10:10 IST)
Updated Date: Tue, 24 May 2022 (10:18 IST)
ಬೆಂಗಳೂರು: ಸ್ಯಾಂಡಲ್ ವುಡ್ ನಿರ್ದೇಶ ಕೆ.ಎನ್ ಮೋಹನ್ ಕುಮಾರ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಅವರಿಗೆ 56 ವರ್ಷ ವಯಸ್ಸಾಗಿತ್ತು. ಸಿನಿಮಾ, ಕಿರುತೆರೆಯಲ್ಲಿ ಕೆಲಸ ಮಾಡಿದ್ದ ಅವರು ವನ್ಯಜೀವಿ ಛಾಯಾಗ್ರಾಹಕರಾಗಿಯೂ ಖ್ಯಾತರಾಗಿದ್ದರು. ಇದೀಗ ಪತ್ನಿ, ನಟಿ, ನಿರೂಪಕಿ ವತ್ಸಲಾ ಮೋಹನ್, ಪುತ್ರಿ, ನಟಿ ಅನನ್ಯಾ ಮೋಹನ್ ಸೇರಿದಂತೆ ಅಪಾರ ಬಂಧು ಮಿತ್ರರನ್ನು ಆಗಲಿದ್ದಾರೆ.
ತಮ್ಮ ಅಪಾರ್ಟ್ ಮೆಂಟ್ ನಲ್ಲಿ ಸ್ನಾನದ ಕೋಣೆಯಲ್ಲಿ ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಇಂದು ಅವರ ಅಂತ್ಯಕ್ರಿಯೆ ನೆರವೇರಲಿದೆ.