ಸ್ಯಾಂಡಲ್ ವುಡ್ ನ ನಟ ವಿಷ್ಣುವರ್ಧನ್, ಉಪೇಂದ್ರ ಹಾಗು ನಟಿ ಶ್ರುತಿಯವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ

Webdunia
ಮಂಗಳವಾರ, 18 ಸೆಪ್ಟಂಬರ್ 2018 (09:47 IST)
ಬೆಂಗಳೂರು : ಇಂದು (ಸೆಪ್ಟೆಂಬರ್ 18) ಸ್ಯಾಂಡಲ್ ವುಡ್ ನ ಖ್ಯಾತ ನಟ 'ಸಾಹಸ ಸಿಂಹ' ಡಾ.ವಿಷ್ಣುವರ್ಧನ್, ರಿಯಲ್ ಸ್ಟಾರ್ ಉಪೇಂದ್ರ ಹಾಗು ನಟಿ ಶ್ರುತಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ.


51ನೇ ವಸಂತಕ್ಕೆ ಕಾಲಿಟ್ಟ ನಟ ಉಪೇಂದ್ರ ಅವರು ಬೆಂಗಳೂರಿನ ಕತ್ರಿಗುಪ್ಪೆಯ ತಮ್ಮ ನಿವಾಸದಲ್ಲಿ ಅಭಿಮಾನಿಗಳ ಸಮ್ಮುಖದಲ್ಲಿ ಇಂದು ತಮ್ಮ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ.


ಈ ಹಿನ್ನೆಲೆಯಲ್ಲಿ ಉಪ್ಪಿ ಅಭಿನಯದ ಆರ್. ಚಂದ್ರು ನಿರ್ದೇಶನದ 'ಐ ಲವ್ ಯೂ' ಚಿತ್ರತಂಡ 3ಡಿ ಮೋಷನ್ ಪೋಸ್ಟರ್ ಮಾಡಿ ಉಪೇಂದ್ರ ಅವರಿಗೆ ಚಿತ್ರತಂಡ ಉಡುಗೊರೆ' ನೀಡಲು ಮುಂದಾಗಿದೆ. ಇನ್ನೂ ರಾಜಕೀಯದಲ್ಲೂ ತಮ್ಮ ಕ್ರಿಯೇಟಿವಿಟಿ ತೋರಿಸಲು ಪ್ರಯತ್ನಿಸುತ್ತಿರುವ ಉಪ್ಪಿ 'ಉತ್ತಮ ಪ್ರಜಾಕೀಯ ಪಕ್ಷ' ವನ್ನು ಅಧಿಕೃತವಾಗಿ ಘೋಷಿಸಿದ್ದಾರೆ.


'ಸಾಹಸ ಸಿಂಹ' ಬದುಕಿದ್ದಿದ್ದರೆ ಅವರಿಗೆ 68 ವರ್ಷ ತುಂಬುತ್ತಿತ್ತು. ವಿಷ್ಣುವರ್ಧನ್ ಅವರ ಸಮಾಧಿಯ ಮುಂದೆ ಇಂದು ಕೇಕ್ ಕಟ್ ಮಾಡುವುದರ ಮೂಲಕ ಅವರ ಹುಟ್ಟುಹಬ್ಬವನ್ನು ಅಭಿಮಾನಿಗಳು ಸಡಗರದಿಂದ ಆಚರಿಸಿಕೊಂಡಿದ್ದಾರೆ.
ಹಾಗೇ ನಟಿ ಶ್ರುತಿ ಸಹ ಇಂದು 43ನೇ ವಸಂತಕ್ಕೆ ಕಾಲಿಡಲಿದ್ದು, ಕುಟುಂಬ ಸದಸ್ಯರ ಜತೆ ಅವರು ಬರ್ತ್​ಡೇ ಆಚರಿಸಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments