Select Your Language

Notifications

webdunia
webdunia
webdunia
webdunia

ಸ್ಯಾಂಡಲ್​ವುಡ್​ ಖ್ಯಾತ ನಿರ್ದೇಶಕ ಎಂ.ಎಸ್​.ರಾಜಶೇಖರ್​ ಇನ್ನಿಲ್ಲ

ಸ್ಯಾಂಡಲ್​ವುಡ್​ ಖ್ಯಾತ ನಿರ್ದೇಶಕ ಎಂ.ಎಸ್​.ರಾಜಶೇಖರ್​ ಇನ್ನಿಲ್ಲ
ಬೆಂಗಳೂರು , ಮಂಗಳವಾರ, 30 ಅಕ್ಟೋಬರ್ 2018 (07:06 IST)
ಬೆಂಗಳೂರು : ಸ್ಯಾಂಡಲ್​ವುಡ್​ ಖ್ಯಾತ ನಿರ್ದೇಶಕ ಎಂ.ಎಸ್​.ರಾಜಶೇಖರ್​ ಅವರು ಸೋಮವಾರ ಬೆಂಗಳೂರಿನ  ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.


ಇವರಿಗೆ 75 ವರ್ಷ ವಯಸ್ಸಾಗಿದ್ದು, ಹಲವು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಕಳೆದ ಮೂರು ದಿನಗಳಿಂದ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಸೋಮವಾರ ಚಿಕಿತ್ಸೆ ಫಲಕಾರಿಯಾಗದೆ ವಿಧಿವಶರಾಗಿದ್ದಾರೆ.


1985ರಲ್ಲಿ ರಾಜ್ ಕುಮಾರ್ ಅಭಿನಯದ ಧ್ರುವತಾರೆ ಸಿನಿಮಾ ಮೂಲಕ ನಿರ್ದೇಶಕರಾಗಿ ಗುರುತಿಸಿಕೊಂಡ ಅವರು ನಂತರ ರಥಸಪ್ತಮಿ, ನಂಜುಂಡಿ ಕಲ್ಯಾಣ, ಹೃದಯ ಹಾಡಿತು ಹೀಗೆ ಸುಮಾರು 35ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶಿಸಿದ್ದರು.


ರವಿಚಂದ್ರನ್ ನಟನೆಯ ರವಿಶಾಸ್ತ್ರಿ ಸಿನಿಮಾ ಇವರು ನಿರ್ದೇಶಿಸಿದ ಕೊನೆಯ ಸಿನಿಮಾವಾಗಿದೆ.ಇವರು ಪತ್ನಿ ರಾಣಿ, ಮಗಳು ಶಾರದಾ, ಮಗ ರಘು ಅವರನ್ನು ಅಗಲಿದ್ದಾರೆ. ಅಂತ್ಯಕ್ರಿಯೆಯು ಮಂಗಳವಾರ ನಡೆಯಲಿದೆ ಎಂದು ಕುಟುಂಬ ಮೂಲಗಳು ತಿಳಿಸಿವೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಮೀಟೂ ಆರೋಪದ ಪೋಸ್ಟ್ ಗೆ ಕೆಟ್ಟದಾಗಿ ಕಾಮೆಂಟ್ ಮಾಡಿದವರ ವಿರುದ್ಧ ದೂರು ನೀಡಿದ ಶೃತಿ ಹರಿಹರನ್