Select Your Language

Notifications

webdunia
webdunia
webdunia
webdunia

ಸ್ಯಾಂಡಲ್ ವುಡ್ ನ ಖ್ಯಾತ ನಿರ್ಮಾಪಕ ಎಸ್.ನಾಗರಾಜ ಶೆಟ್ಟಿ ನಿಧನ

webdunia
ಸೋಮವಾರ, 3 ಡಿಸೆಂಬರ್ 2018 (07:12 IST)
ಬೆಂಗಳೂರು : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಮಾಜಿ ಅಧ್ಯಕ್ಷ ನಿರ್ಮಾಪಕ ಎಸ್.ನಾಗರಾಜ ಶೆಟ್ಟಿ ಭಾನುವಾರ ವಿಧಿವಶರಾಗಿದ್ದಾರೆ.


ಪರಾಜಯ, ನಾಗರಹೊಳೆ, ನೂರುಜನ್ಮ, ಕೂಡಿಬಾಳಿದರೆ ಸ್ವರ್ಗ ಸುಖ ಹಾಗೂ ಶ್ರಾವಣ ಸಂಜೆದಂತ ಚಿತ್ರಗಳನ್ನು ನಿರ್ಮಿಸಿದ್ದ ನಾಗರಾಜ್ ಶೆಟ್ಟಿ ಅವರು ಕನ್ನಡ ಚಿತ್ರರಂಗದಲ್ಲಿ ಅಪಾರ ಸೇವೆ ಸಲ್ಲಿಸಿದ್ದಾರೆ.


ಇವರು ಕನ್ನಡ ಚಿತ್ರರಂಗದಲ್ಲಿ ನಿರ್ಮಾಪಕ, ಪ್ರದರ್ಶಕ ಹಾಗೂ ವಿತರಕ ವಿಭಾಗದಲ್ಲಿ ಅವರು ಗುರುತಿಸಿಕೊಂಡಿದ್ದರು. ಹಾಗೇ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿಯೂ  ಕಾರ್ಯನಿರ್ವಹಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia Hindi

ಮುಂದಿನ ಸುದ್ದಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ನಟಿ ಪ್ರಿಯಾಂಕ ಚೋಪ್ರಾ