Select Your Language

Notifications

webdunia
webdunia
webdunia
webdunia

ಚಿರಂಜೀವಿ ‘ಆಚಾರ್ಯ’ ಚಿತ್ರದಲ್ಲಿ ನಟಿಸಲಿದ್ದಾರಂತೆ ಸ್ಯಾಂಡಲ್ ವುಡ್ ನ ಸ್ಟಾರ್ ನಟ

ಚಿರಂಜೀವಿ ‘ಆಚಾರ್ಯ’ ಚಿತ್ರದಲ್ಲಿ ನಟಿಸಲಿದ್ದಾರಂತೆ ಸ್ಯಾಂಡಲ್ ವುಡ್ ನ ಸ್ಟಾರ್ ನಟ
ಹೈದರಾಬಾದ್ , ಮಂಗಳವಾರ, 2 ಫೆಬ್ರವರಿ 2021 (09:49 IST)
ಹೈದರಾಬಾದ್ : ಮೆಗಾಸ್ಟಾರ್ ಚಿರಂಜೀವಿ ಅವರು ಪ್ರಸ್ತುತ ಕೊರಟಾಲ ಶಿವ ನಿರ್ದೇಶನದ ‘ಆಚಾರ್ಯ’ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಚಿತ್ರದ ಬಿಡುಗಡೆಯ ದಿನಾಂಕ ನಿಗದಿಯಾಗಿದ್ದು, ಚಿತ್ರದ ಶೂಟಿಂಗ್ ಭರದಿಂದ ಸಾಗುತ್ತಿದೆ.

ಈ ಚಿತ್ರದಲ್ಲಿ ನಟಿ ಕಾಜಲ್ ಚಿರಂಜೀವಿ ಅವರ ಜೊತೆ ನಟಿಸಲಿದ್ದಾರೆ.  ಹಾಗೇ ಸ್ಟಾರ್ ನಟ ರಾಮ್ ಚರಣ್ ಈ ಚಿತ್ರದಲ್ಕಿ ‘ಸಿದ್ದ’ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬಾಲಿವುಡ್ ಹೀರೋ ಸೋನು ಸೂದ್ ಅವರು ಈ ಚಿತ್ರದಲ್ಲಿ ನಟಿಸಲಿದ್ದಾರೆ ಎಂದು ವರದಿಯಾಗಿದೆ.  ಇದೀಗ ಮತ್ತೊಬ್ಬ ನಟನ ಹೆಸರು ಕೇಳಿಬರುತ್ತಿದೆ.

ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಅವರು ಆಚಾರ್ಯ ಚಿತ್ರದಲ್ಲಿ ಪ್ರಮುಖ ಪಾತ್ರದಲ್ಲಿ ನಟಿಸಲಿದ್ದಾರೆ. ಅದಕ್ಕಾಗಿ ದೃಶ್ಯವನ್ನು ರಚಿಸಲಾಗುತ್ತಿದೆ  ಎನ್ನಲಾಗಿದೆ . ಈ ಬಗ್ಗೆ ಅಧಿಕೃತ ಮಾಹಿತಿ ಇನ್ನು ಬಿಡುಗಡೆಯಾಗಿಲ್ಲ. ಈ ಹಿಂದೆ ಸುದೀಪ್ ಚಿರಂಜೀವಿ ಅವರ ಜೊತೆ ‘ಸೈರಾ ನರಸಿಂಹ ರೆಡ್ಡಿ’ ಚಿತ್ರದಲ್ಲಿ ನಟಿಸಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ನಾಳೆ ರಾಬರ್ಟ್ ತೆಲುಗು ಟೀಸರ್ ರಿಲೀಸ್