Select Your Language

Notifications

webdunia
webdunia
webdunia
webdunia

ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ ತನಿಖೆಗೆ ಚೇತನ್ ಅಹಿಂಸಾ ನಿಯೋಗ ಸಿಎಂ ಸಿದ್ದರಾಮಯ್ಯಗೆ ಮನವಿ

Sandalwood stars-Siddaramaiah

Krishnaveni K

ಬೆಂಗಳೂರು , ಗುರುವಾರ, 5 ಸೆಪ್ಟಂಬರ್ 2024 (12:53 IST)
ಬೆಂಗಳೂರು: ಮಲಯಾಳಂ ಚಿತ್ರರಂಗದಂತೆ ಕನ್ನಡ ಚಿತ್ರರಂಗದಲ್ಲೂ ಲೈಂಗಿಕ ಕಿರುಕುಳ ಆರೋಪಗಳ ಬಗ್ಗೆ ವಿಶೇಷ ಸಮಿತಿ ರಚಿಸಿ ತನಿಖೆ ನಡೆಸುವಂತೆ ಇಂದು ನಟ, ಸಾಮಾಜಿಕ ಕಾರ್ಯಕರ್ತ ಚೇತನ್ ಅಹಿಂಸಾ ನೇತೃತ್ವದಲ್ಲಿ ಸಿನಿ ತಾರೆಯರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮನವಿ ಪತ್ರ ಸಲ್ಲಿಸಿದೆ.

ಮಲಯಾಳಂ ಚಿತ್ರರಂಗದಲ್ಲಿ ಹೇಮಾ ಕಮಿಟಿ ವರದಿ ದೊಡ್ಡ ಬಿರುಗಾಳಿಯನ್ನೇ ಎಬ್ಬಿಸಿದೆ. ಸಾಕಷ್ಟು ನಟರ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿಬಂದಿದೆ. ಇದೀಗ ಕನ್ನಡ ಚಿತ್ರರಂಗದಲ್ಲೂ ಮಹಿಳಾ ಕಲಾವಿದರ ಮೇಲಾಗುತ್ತಿರುವ ಲೈಂಗಿಕ ದೌರ್ಜನ್ಯಗಳನ್ನು ಬೆಳಕಿಗೆ ತರಬೇಕು ಎನ್ನುವ ಉದ್ದೇಶದಿಂದ ಇಂದು ಸಮಿತಿ ರಚಿಸುವಂತೆ ಫೈರ್ ಸಂಸ್ಥೆಯ ನಿಯೋಗ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ಹಿರಿಯ ಸಾಮಾಜಿಕ ಕಾರ್ಯಕರ್ತೆ ವಿಜಯಮ್ಮ, ನಟ ಚೇತನ್ ನೇತೃತ್ವದ ಫೈರ್ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಅರ್ಪಿಸಿತು. ಈ ವೇಳೆ ನಟಿಯರಾದ ಶ್ರುತಿ ಹರಿಹರನ್, ನೀತೂ ಕೂಡಾ ಉಪಸ್ಥಿತರಿದ್ದರು. ಇವರ ಮನವಿಗೆ ಸಿಎಂ ಕಡೆಯಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದೆ.

ಸ್ಯಾಂಡಲ್ ವುಡ್ ನಲ್ಲೂ ಆಗೊಮ್ಮೆ ಈಗೊಮ್ಮೆ ಲೈಂಗಿಕ ಕಿರುಕುಳದ ಆರೋಪಗಳು ಕೇಳಿಬಂದಿದ್ದು ಇದೆ. ಈ ಹಿಂದೆ ಶ್ರುತಿ ಹರಿಹರನ್ ಮತ್ತು ಅರ್ಜುನ್ ಸರ್ಜಾ ಪ್ರಕರಣ ಸಾಕಷ್ಟು ಸದ್ದು ಮಾಡಿತ್ತು. ಈಗ ವಿಶೇಷ ಸಮಿತಿ ರಚಿಸಿ ತನಿಖೆ ನಡೆಸಿದರೆ ಚಿತ್ರರಂಗದಲ್ಲಿ ಬಿರುಗಾಳಿಯೇ ಏಳುವುದರಲ್ಲಿ ಸಂಶಯವಿಲ್ಲ.

Share this Story:

Follow Webdunia kannada

ಮುಂದಿನ ಸುದ್ದಿ

ಸ್ವಲ್ಪ ದಯೆ ತೋರಿ ಬಿಟ್ಟಿದ್ರೂ ಸಾಕಿತ್ತು: ರೇಣುಕಾಸ್ವಾಮಿ ಫೋಟೋ ನೋಡಿ ತಾಯಿ ಕಣ್ಣೀರು