ನಟ ಕಿಚ್ಚ ಸುದೀಪ್ ತಾಯಿಗೆ ಅಂತಿಮ ನಮನ ಸಲ್ಲಿಸಿದ ಸ್ಯಾಂಡಲ್‌ವುಡ್ ತಾರೆಯರು

Sampriya
ಭಾನುವಾರ, 20 ಅಕ್ಟೋಬರ್ 2024 (16:52 IST)
Photo Courtesy X
ಬೆಂಗಳೂರು: ಕನ್ನಡದ ನಟ ಕಿಚ್ಚ ಸುದೀಪ್ ಅವರ ತಾಯಿಯ ನಿಧನಕ್ಕೆ ಕನ್ನಡ ಚಿತ್ರರಂಗದ ಗಣ್ಯರು ಸೇರಿದಂತೆ ರಾಜಕೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ. ಜೆಪಿ ನಗರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಬೆಳಗ್ಗೆಯಿಂದ ಅನೇಕ ಗಣ್ಯರು ಭೇಟಿ ನೀಡಿದ್ದಾರೆ.

ನಟ ಶಿವರಾಜ್‌ಕುಮಾರ್‌ ದಂಪತಿ, ರಕ್ಷಿತಾ ಪ್ರೇಮ್‌ ದಂಪತಿ, ಡಾಲಿ ಧನಂಜಯ್, ದೊಡ್ಡಣ್ಣ ದಂಪತಿ, ರಾಕ್‌ಲೈನ್ ವೆಂಕಟೇಶ್‌, ದೇವರಾಜ್ ಕುಟುಂಬ, ತಾರಾ ಅನುರಾಧಾ, ಸೃಜನ್, ಗಿರಿಜಾ ಲೋಕೇಶ್‌, ತರುಣ್ ಸುಧೀರ್, ರವಿಶಂಕರ್ ಅವರು ಸುದೀಪ್ ತಾಯಿಗೆ ಅಂತಿಮ ನಮನ ಸಲ್ಲಿಸಿದರು.

ಇನ್ನೂ ಬಿಗ್‌ಬಾಸ್‌ ಸ್ಪರ್ಧಿಗಳಾದ ಪ್ರಥಮ್, ತುಕಾಲಿ ಸಂತೋಷ್,  ಆರ್ಯವರ್ಧನ್ ಗುರೂಜಿ, ವಿನಯ್, ಕಾರ್ತಿಕ್ ಮಹೇಶ್, ಸಿರಿ, ರಂಜಿತ್ ಹಾಗೂ ಲಾಯರ್ ಜಗದೀಶ್ ಅವರು ಸುದೀಪ್ ತಾಯಿಯ ನಿಧನದ ಸುದ್ದಿ ತಿಳಿದು ನಟನ ಮನೆಗೆ ತೆರಳಿ ಅಂತಿಮ ದರ್ಶನ ಪಡೆದರು.

ಅಂದಹಾಗೆ, ನ್ಯುಮೋನಿಯದಿಂದ ಬಳಲುತ್ತಿದ್ದ ಸುದೀಪ್ ತಾಯಿ ಇಂದು (ಅ.20) ಬೆಳಗ್ಗೆ ವಿಧಿವಶರಾಗಿದ್ದಾರೆ. ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಇನ್ನೂ ಇಂದು ಸಂಜೆ 7 ಗಂಟೆಗೆ ವಿಲ್ಸನ್ ಗಾರ್ಡನ್ ಚಿತಾಗಾರದಲ್ಲಿ ಸುದೀಪ್ ತಾಯಿಯ ಅಂತ್ಯಕ್ರಿಯೆ ನಡೆಯಲಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟಿ ಶಿಲ್ಪಾಗೆ ಮುಗಿಯದ ಸಂಕಷ್ಟ, ತಾಯಿ ಸುನಂದಾ ಶೆಟ್ಟಿ ಆಸ್ಪತ್ರೆಗೆ ದಾಖಲು

ಸುಶಾಂತ್ ಸಿಂಗ್‌ನದ್ದು ಆತ್ಮಹತ್ಯೆಯಲ್ಲ ಇಬ್ಬರಿಂದ ಕೊಲೆ ನಡೆದಿದೆ: ಸಹೋದರಿ ಶ್ವೇತಾ ಸಿಂಗ್‌

ವಧು ವರರ ಲುಕ್‌ನಲ್ಲಿ ದರ್ಶನ್, ಪವಿತ್ರಾ ಗೌಡ, ವೈರಲ್ ಫೋಟೋ ಹಿಂದಿನ ಗುಟ್ಟು ಇದೇನಾ

ದರ್ಶನ್ ಆಂಡ್ ಗ್ಯಾಂಗ್ ಗೆ ತಾತ್ಕಾಲಿಕ ರಿಲೀಫ್: ದೋಷಾರೋಪಪಟ್ಟಿ ಮುಂದೂಡಿಕೆ

ಮಗ ವಿನೀಶ್ ಹುಟ್ಟುಹಬ್ಬದಂದೇ ದರ್ಶನ್ ಗೆ ಅಗ್ನಿಪರೀಕ್ಷೆ: ದಾಸನಿಗೆ ಎದೆಯಲ್ಲಿ ಢವ ಢವ

ಮುಂದಿನ ಸುದ್ದಿ
Show comments