ಬೆಂಗಳೂರು: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಶುಕ್ರವಾರ ಕನ್ನಡ ಸಂಘಟನೆಗಳು ಕರೆ ನೀಡಿರುವ ಕರ್ನಾಟಕ ಬಂದ್ ಗೆ ಕನ್ನಡ ಚಿತ್ರರಂಗವೂ ಸಾಥ್ ಕೊಡಲಿದೆ.
ಮೊನ್ನೆ ಬೆಂಗಳೂರು ಬಂದ್ ಗೂ ಕನ್ನಡ ಚಲನಚಿತ್ರ ರಂಗ ಚಿತ್ರೀಕರಣ ಬಂದ್ ಮಾಡಿ, ಸಿನಿಮಾ ಪ್ರದರ್ಶನ ಮಾಡದೇ ಬೆಂಬಲ ನೀಡಿತ್ತು. ಇದೀಗ ಸ್ಯಾಂಡಲ್ ವುಡ್ ಕಲಾವಿದರು ಹೋರಾಟದಲ್ಲೂ ಭಾಗಿಯಾಗಲಿದ್ದಾರೆ.
ಪ್ರತಿಭಟನೆಯಲ್ಲಿ ಯಾವೆಲ್ಲಾ ಕಲಾವಿದರು ಭಾಗಿಯಾಗಲಿದ್ದಾರೆ ಎಂಬುದು ಸ್ಪಷ್ಟವಾಗಿಲ್ಲ. ಆದರೆ ಹೋರಾಟದಲ್ಲಿ ಸ್ಯಾಂಡಲ್ ವುಡ್ ಕಲಾವಿದರು ಭಾಗಿಯಾಗಲಿದ್ದಾರೆ ಎಂದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ‍್ಯಕ್ಷ ಎನ್.ಎಂ. ಸುರೇಶ್ ಹೇಳಿದ್ದಾರೆ.