Photo Courtesy: Instagram
ಬೆಂಗಳೂರು: ಬಾ ನಲ್ಲೆ ಮಧುಚಂದ್ರಕೆ ಖ್ಯಾತಿಯ ಸ್ಯಾಂಡಲ್ ವುಡ್ ಹಿರಿಯ ನಟ, ಮಾಜಿ ಐಎಎಸ್ ಅಧಿಕಾರಿ ಕೆ ಶಿವರಾಮ್ ಗೆ ಹೃದಯಾಘಾತವಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.
ಶಿವರಾಮ್ ಅವರನ್ನು ಬೆಂಗಳೂರಿನ ಎಚ್ ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನಡೆಸಲಾಗುತ್ತಿದೆ. ಶಿವರಾಮ್ ಅಳಿಯ ಭರತ್ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಕೆಲವು ದಿನಗಳ ಹಿಂದೆ ರಕ್ತದೊತ್ತಡದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಅವರಿಗೆ ಹೃದಯಾಘಾತವಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದಿದ್ದಾರೆ. ಡಯಾಲಿಸಿಸ್ ಚಿಕಿತ್ಸೆ ನೀಡಲಾಗುತ್ತಿದೆ ಜೊತೆಗೆ ಅವರ ಮೆದುಳು ನಿಷ್ಕ್ರಿಯವಾಗಿದೆ ಎಂದೂ ಹೇಳಲಾಗಿದೆ.
ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಬಾ ನಲ್ಲೆ ಮಧು ಚಂದ್ರಕೆ ಸಿನಿಮಾ ಶಿವರಾಮ್ ಗೆ ಹೆಸರು ತಂದುಕೊಟ್ಟಿತ್ತು. ಇದಲ್ಲದೆ ವಸಂತ ಕಾವ್ಯ, ಯಾರಿಗೆ ಬೇಡ ದುಡ್ಡು ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡಿಗರ ಮನ ಗೆದ್ದಿದ್ದರು. ಓರ್ವ ಐಎಎಸ್ ಅಧಿಕಾರಿಯಾಗಿಯೂ ಕಾರ್ಯನಿರ್ವಹಿಸಿದ ಹೆಮ್ಮೆ ಅವರದ್ದು. ಆದರೆ ಕೆಲವು ವರ್ಷಗಳಿಂದ ಸಿನಿಮಾಗಳಿಂದ ದೂರವಿದ್ದರು.