Webdunia - Bharat's app for daily news and videos

Install App

ಸ್ಯಾಂಡಲ್ ವುಡ್ ಹಿರಿಯ ನಟ ಕೆ ಶಿವರಾಮ್ ಗೆ ಹೃದಯಾಘಾತ

Krishnaveni K
ಬುಧವಾರ, 28 ಫೆಬ್ರವರಿ 2024 (17:10 IST)
Photo Courtesy: Instagram
ಬೆಂಗಳೂರು: ಬಾ ನಲ್ಲೆ ಮಧುಚಂದ್ರಕೆ ಖ್ಯಾತಿಯ ಸ್ಯಾಂಡಲ್ ವುಡ್ ಹಿರಿಯ ನಟ, ಮಾಜಿ ಐಎಎಸ್ ಅಧಿಕಾರಿ ಕೆ ಶಿವರಾಮ್ ಗೆ ಹೃದಯಾಘಾತವಾಗಿದ್ದು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ತಿಳಿದುಬಂದಿದೆ.

ಶಿವರಾಮ್ ಅವರನ್ನು ಬೆಂಗಳೂರಿನ ಎಚ್ ಸಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯಕ್ಕೆ ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ. ಹೀಗಾಗಿ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನಡೆಸಲಾಗುತ್ತಿದೆ.  ಶಿವರಾಮ್ ಅಳಿಯ ಭರತ್ ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಕೆಲವು ದಿನಗಳ ಹಿಂದೆ ರಕ್ತದೊತ್ತಡದಲ್ಲಿ ಏರುಪೇರಾದ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಅವರಿಗೆ ಹೃದಯಾಘಾತವಾಗಿದೆ. ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದಿದ್ದಾರೆ. ಡಯಾಲಿಸಿಸ್ ಚಿಕಿತ್ಸೆ ನೀಡಲಾಗುತ್ತಿದೆ ಜೊತೆಗೆ ಅವರ ಮೆದುಳು ನಿಷ್ಕ್ರಿಯವಾಗಿದೆ ಎಂದೂ ಹೇಳಲಾಗಿದೆ.

ನಾಗತಿಹಳ್ಳಿ ಚಂದ್ರಶೇಖರ್ ನಿರ್ದೇಶನದ ಬಾ ನಲ್ಲೆ ಮಧು ಚಂದ್ರಕೆ ಸಿನಿಮಾ ಶಿವರಾಮ್ ಗೆ ಹೆಸರು ತಂದುಕೊಟ್ಟಿತ್ತು. ಇದಲ್ಲದೆ ವಸಂತ ಕಾವ್ಯ, ಯಾರಿಗೆ ಬೇಡ ದುಡ್ಡು ಸೇರಿದಂತೆ ಹಲವಾರು ಸಿನಿಮಾಗಳಲ್ಲಿ ಅಭಿನಯಿಸಿ ಕನ್ನಡಿಗರ ಮನ ಗೆದ್ದಿದ್ದರು. ಓರ್ವ ಐಎಎಸ್ ಅಧಿಕಾರಿಯಾಗಿಯೂ ಕಾರ್ಯನಿರ್ವಹಿಸಿದ ಹೆಮ್ಮೆ ಅವರದ್ದು. ಆದರೆ ಕೆಲವು ವರ್ಷಗಳಿಂದ ಸಿನಿಮಾಗಳಿಂದ ದೂರವಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments