Select Your Language

Notifications

webdunia
webdunia
webdunia
webdunia

ಹಿರಿಯ ನಟ ಯಶವಂತ ಸರದೇಶಪಾಂಡೆ ಇನ್ನಿಲ್ಲ

Yashavanth Sardeshpande

Krishnaveni K

ಬೆಂಗಳೂರು , ಸೋಮವಾರ, 29 ಸೆಪ್ಟಂಬರ್ 2025 (13:46 IST)
ಬೆಂಗಳೂರು: ಹಿರಿಯ ರಂಗಭೂಮಿ ಕಲಾವಿದ, ಸ್ಯಾಂಡಲ್ ವುಡ್ ನಟ ಯಶವಂತ ಸರದೇಶಪಾಂಡೆ ಹೃದಯಾಘಾದಿಂದ ನಿಧನರಾಗಿದ್ದಾರೆ. ಇಂದು ಬೆಳಿಗ್ಗೆ ಸುಮಾರು 10 ಗಂಟೆಗೆ ಅವರು ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.

ಅವರಿಗೆ 60 ವರ್ಷ ವಯಸ್ಸಾಗಿತ್ತು. ಇಂದು  ಬೆಳಿಗ್ಗೆ ಸುಮಾರು 10 ಗಂಟೆಗೆ ಅವರಿಗೆ ತೀವ್ರ ಹೃದಯಾಘಾವತಾಗಿದೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಜೀವ ಉಳಿಸಲಾಗಲಿಲ್ಲ.

ಅವರ ಸಾವಿಗೆ ಕನ್ನಡ ಚಿತ್ರರಂಗದ ಕಲಾವಿದರು, ಅಭಿಮಾನಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ. ಹಾಸ್ಯ ನಟನಾಗಿ, ಪೋಷಕ ನಟನಾಗಿ ಕನ್ನಡ ಚಿತ್ರರಂಗದಲ್ಲಿಯೂ ಗುರುತಿಸಿಕೊಂಡಿದ್ದರು. ಎಲ್ಲಕ್ಕಿಂತ ಹೆಚ್ಚಾಗಿ ರಂಗಭೂಮಿ ಕಲಾವಿದನಾಗಿಯೇ ಹೆಸರು ಮಾಡಿದ್ದರು.

ಕಿರುತೆರೆ ಧಾರವಾಹಿ, ರಿಯಾಲಿಟಿ ಶೋಗಳಲ್ಲೂ ನಟಿಸಿದ್ದರು. ಅವರ ಪತ್ನಿ ಮಾಲತಿ ಸರದೇಶಪಾಂಡೆ ಕೂಡಾ ಕಿರುತೆರೆ ಧಾರವಾಹಿಗಳಲ್ಲಿ ಅಮ್ಮನ ಪಾತ್ರದ ಮೂಲಕ ಖ್ಯಾತಿ ಮಾಡಿದ್ದರು.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂತಾರ ಚಾಪ್ಟರ್ 1 ಟಿಕೆಟ್ ದರ ಕೇಳಿದ್ರೆ ಶಾಕ್ ಆಗ್ತೀರಿ