Publish Date: Sun, 27 Dec 2020 (10:02 IST)
Updated Date: Sun, 27 Dec 2020 (10:04 IST)
ಬೆಂಗಳೂರು: ಡ್ರಗ್ ಕೇಸ್ ನಲ್ಲಿ ಬಂಧಿತರಾಗಿ ಇತ್ತೀಚೆಗಷ್ಟೇ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ ನಟಿ ಸಂಜನಾ ಗಲ್ರಾನಿ ಇದೀಗ ಮತ್ತೆ ಸಿಸಿಬಿ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.
ಜಾಮೀನು ನೀಡುವಾಗ 15 ದಿನಕ್ಕೊಮ್ಮೆ ಸಿಸಿಬಿ ಮುಂದೆ ಹಾಜರಾಗಬೇಕೆಂದು ಕೋರ್ಟ್ ಷರತ್ತು ವಿಧಿಸಿತ್ತು. ಅದರಂತೆ ವಿಚಾರಣೆಗೆ ಹಾಜರಾದ ಸಂಜನಾಗೆ ಸಿಸಿಬಿ ಅಧಿಕಾರಿಗಳು ಕೆಲವೊಂದು ಪ್ರಶ್ನೆಗಳನ್ನು ಕೇಳಿದ್ದಾರೆ. ಆದರೆ ಇದಕ್ಕೆ ಅವರು ನೀಡಿದ ಉತ್ತರದಿಂದ ತೃಪ್ತರಾಗಿಲ್ಲ ಎನ್ನಲಾಗಿದೆ. ಈಗಾಗಲೇ ಬಂಧಿತರಾಗಿರುವ ಕೆಲವರ ಬಗ್ಗೆ ಕೇಳಿದ ಪ್ರಶ್ನೆಗೆ ಆಕೆ ಸಮರ್ಪಕ ಉತ್ತರ ನೀಡಿಲ್ಲ. ಹೀಗಾಗಿ ಅವರನ್ನು ಮತ್ತೆ ವಿಚಾರಣೆಗೊಳಪಡಿಸಲಾಗುವುದು ಎಂದು ಸಿಸಿಬಿ ಅಧಿಕಾರಿಗಳು ಹೇಳಿದ್ದಾರೆ.