ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಬಂಧಿತರಾಗಿರುವ ನಟಿ ಸಂಜನಾ ಗಲ್ರಾನಿ ಆರೋಗ್ಯ ಸಮಸ್ಯೆ ನೀಡಿ ಜಾಮೀನು ನೀಡುವಂತೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಇದರ ವಿಚಾರಣೆ ನಡೆಸಿದೆ.
ಸಂಜನಾ ತಮಗೆ ಚಳಿಗಾಲದಲ್ಲಿ ಅಸ್ತಮಾ ಸಮಸ್ಯೆ ಉಲ್ಬಣವಾಗುತ್ತದೆ. ಈ ಹಿಂದೆಯೂ ಇದಕ್ಕೆ ಶಸ್ತ್ರಚಿಕಿತ್ಸೆಗೊಳಗಾಗಿದ್ದೇನೆ ಎಂದಿದ್ದರು. ಈ ಸಂಬಂಧ ವೈದ್ಯಕೀಯ ತಪಾಸಣೆ ನಡೆಸಿ ವರದಿ ನೀಡುವಂತೆ ಹೈಕೋರ್ಟ್ ಸೂಚಿಸಿತ್ತು. ಅದರಂತೆ ಅವರನ್ನು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಲಾಗಿತ್ತು. ಅದರ ವರದಿಯಲ್ಲಿ ಸದ್ಯಕ್ಕೆ ಮೆಡಿಕೇಷನ್ ನಲ್ಲಿ ಮುಂದುವರಿಯಬಹುದು. ಅಗತ್ಯ ಬಿದ್ದರೆ ಶಸ್ತ್ರಚಿಕಿತ್ಸೆ ಮಾಡಬೇಕಾಗುತ್ತದೆ ಎಂದು ವರದಿ ಬಂದಿದೆ. ಇದರ ಬಗ್ಗೆ ಸಿಸಿಬಿ ಪರ ಪೊಲೀಸರನ್ನು ಹೈಕೋರ್ಟ್ ಪ್ರಶ್ನಿಸಿದೆ. ಆದರೆ ಜಾಮೀನು ನೀಡಬೇಕೇ ಎಂಬ ಬಗ್ಗೆ ಇನ್ನೂ ತೀರ್ಮಾನ ಮಾಡಿಲ್ಲ.