ಕನ್ನಡದ ನಟಿ ಸಂಜನಾ ಗಲ್ರಾನಿ ಅವರು ಯುಗಾದಿ ಹಬ್ಬದ ದಿನದಂದು ಸಿಹಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಎರಡನೇ ಬಾರೀ ಮಗುವನ್ನು ಸ್ವಾಗತಿಸುತ್ತಿರುವ ಬಗ್ಗೆ ಪೋಸ್ಟ್ ಹಾಕಿದ್ದಾರೆ.
ಹಸಿರು ಸೀರೆಯನ್ನುಟ್ಟು ಫೋಟೋ ಶೂಟ್‌ನ ವಿಡಿಯೋ ಹಂಚಿಕೊಂಡು, ಯುಗಾದಿಯ ಹೊಸ ಬೆಳಕು ನಿಮ್ಮ ಜೀವನದಲ್ಲಿ ಶಾಂತಿ, ಸಮೃದ್ಧೀ ಮತ್ತು ಸಂತೋಷವನ್ನು ತರಲಿ ಎಂದು ಬರೆದುಕೊಂಡಿದ್ದಾರೆ.
ಇದನ್ನು ನೋಡಿದ ಅಭಿಮಾನಿಗಳು ನಟಿಗೆ ಶುಭಹಾರೈಸಿ, ಒಳ್ಳೆಯದಾಗಲಿ ಎಂದು ಬರೆದುಕೊಂಡಿದ್ದಾರೆ. 2021ರಲ್ಲಿ ಸಂಜನಾ ಅವರು ಖ್ಯಾತ ವೈದ್ಯರಾಗಿರುವ ಅಜೀಜ್ ಪಾಷಾ ಅವರನ್ನು ಮದುವೆಯಾರು. ಈ ದಂಪತಿ 2022ರಲ್ಲಿ ಗಂಡು ಮಗುವನ್ನು ಸ್ವಾಗತಿಸಿತು.
ಸಾಮಾಜಿಕ ಜಾಲತಾಣದಲ್ಲಿ ಆಕ್ಟೀವ್ ಆಗಿರುವ ಸಂಜನಾ ಅವರು ಆಗಾಗ ಮಗನ ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೊಳ್ಳುತ್ತಿರುತ್ತಾರೆ. ಸಿನಿಮಾ ಅಲ್ಲದೆ ಇತರ ಕಾರ್ಯಕ್ರಮಗಳಕ್ಕೂ ಸಂಜನಾ ವೇದಿಕೆಯಲ್ಲಿ ಕಾಣಿಸಿಕೊಳ್ಳುತ್ತಿರುತ್ತಾರೆ.
ತೆಲುಗು ಸಿನಿಮಾ ಮೂಲಕ ಬಣ್ಣದ ಲೋಕಕ್ಕೆ ಪಾದಾರ್ಪಣೆ ಮಾಡಿದ ಸಂಜನಾ ಅವರು ಕನ್ನಡ ಸಿನಿಮಾದಲ್ಲೂ ಅಭಿನಯಿಸಿ ಹೆಸರು ಗಳಿಸಿದರು. ತಮ್ಮ ಡ್ಯಾನ್ಸ್ ಮೂಲಕ ಪಡ್ಡೆ ಹುಡುಗರ ಮನಸ್ಸು ಕದ್ದಿದ್ದರು. ಇನ್ನೂ ಡ್ರಗ್ಸ್ ಪ್ರಕರಣದಲ್ಲಿ ಜೈಲು ಸೇರಿದ್ದ ವೇಳೆ ಸಂಜನಾ ಅವರು ಅಜೀಜ್ ಅವರನ್ನು ಮದುವೆಯಾಗಿರುವ ವಿಚಾರ ಬಹಿರಂಗವಾಹಿತು. ಇದೀಗ ಈ ದಂಪತಿ ಎರಡನೇ ಮಗುವಿನ ಆಗಮನದ ಖುಷಿಯಲ್ಲಿದ್ದಾರೆ.