ಬೆಂಗಳೂರು: ಡ್ರಗ್ ಮಾಫಿಯಾ ಪ್ರಕರಣದಲ್ಲಿ ಬಂಧಿತರಾಗಿ ಸದ್ಯಕ್ಕೆ ಜಾಮೀನಿನ ಮೇಲೆ ಬಿಡುಗಡೆಗೊಂಡಿರುವ ನಟಿ ಸಂಜನಾ ಗಲ್ರಾನಿ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಸಕ್ರಿಯರಾಗಿದ್ದಾರೆ.
ಮೊನ್ನೆಯಷ್ಟೇ ಅಭಿಮಾನಿಗಳ ಪೋಸ್ಟ್ ರಿ ಪೋಸ್ಟ್ ಮಾಡಿದ್ದ ಸಂಜನಾ ಈಗ ಸುದೀರ್ಘ ಸಂದೇಶ ಬರೆದಿದ್ದು, ಕಷ್ಟದ ಸಮಯದಲ್ಲಿ ಬೆಂಬಲಿಸಿದವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಜೊತೆಗೆ ತಮ್ಮನ್ನು ಬೆಂಬಲಿಸಿ ಮಾತನಾಡಿದವರ ಖಾತೆಗಳನ್ನು ಟ್ಯಾಗ್ ಮಾಡಿ ಧನ್ಯವಾದ ಸಲ್ಲಿಸಿದ್ದಾರೆ. ಸದ್ಯದಲ್ಲೇ ಮತ್ತೆ ಬಣ್ಣದ ಲೋಕಕ್ಕೆ ಮರಳುವುದಾಗಿ ಹೇಳಿಕೊಂಡಿದ್ದಾರೆ.