ಅಭಿನಯ ಸರಸ್ವತಿ ಎಂದೇ ಖ್ಯಾತಿ ಪಡೆದ ಹಿರಿಯ ನಟಿ ಬಿ.ಸರೋಜಾ ದೇವಿ ಅವರು ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾರೆ. ಡಾ.ರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ ಹಾದಿಯಕ್ಕೇ ಸರೋಹಾದೇವಿ ಅವರು ಕೂಡಾ ನೇತ್ರಾದಾನ ಮಾಡಿದ್ದಾರೆ.
ಬೆಂಗಳೂರಿನ ನಾರಾಯಣ ನೇತ್ರಾಲಯಕ್ಕೆ ನೇತ್ರದಾನ ಮಾಡಿದ್ದರು. ಅದರಂತೆ ಇಂದು ಸರೋಜಾದೇವಿ ಅವರ ಕಣ್ಣುಗಳನ್ನು ಪಡೆಯಲಾಗುತ್ತಿದೆ. ವೈದ್ಯರ ತಂಡ ಮಲ್ಲೇಶ್ವರಂನಲ್ಲಿರುವ ಮೆನೆಗೆ ಆಗಮಿಸಿದ್ದು, ನೇತ್ರದಾನ ಪ್ರಕ್ರಿಯೆಯನ್ನ ಪೂರ್ಣಗೊಳಿಸಲಾಗುತ್ತಿದೆ. ನೇತ್ರದಾನ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಅಂತಿಮ ದರ್ಶನ ಮತ್ತೆ ನಡೆಯಲಿದೆ.
ಕನ್ನಡ ವರನಟ ಡಾ.ರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್ ಕೂಡ ನೇತ್ರದಾನ ಮಾಡಿದ್ದರು. ಪುನೀತ್ ಅವರು ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಪುನೀತ್ ರಾಜ್‌ಕುಮಾರ್ ಅವರ ಅಕಾಲಿಕ ಮರಣದ ನಂತರ ಅವರ ಕಣ್ಣುಗಳನ್ನು ನಾರಾಯಣ ನೇತ್ರಾಲಯದಲ್ಲಿ ಇಬ್ಬರು ಅಂಧರಿಗೆ ಅಳವಡಿಸಲಾಗಿದೆ. ಇದೀಗ ಅವರ ದಾರಿಯಲ್ಲೇ ಸರೋಜಾದೇವಿ ನಡೆದುಕೊಂಡಿದ್ದಾರೆ.