Select Your Language

Notifications

webdunia
webdunia
webdunia
webdunia

ವಿಷ್ಣುವರ್ಧನ್‌ 75ನೇ ಜನ್ಮದಿನದಂದೇ ಕರ್ನಾಟಕ ರತ್ನ ಪುರಸ್ಕಾರ ನೀಡಲು ಹಿರಿಯ ನಟಿಯರಿಂದ ಒತ್ತಾಯ

Karnataka Ratna Award, Chief Minister Siddaramaiah, Kannada Film Industry

Sampriya

ಬೆಂಗಳೂರು , ಮಂಗಳವಾರ, 2 ಸೆಪ್ಟಂಬರ್ 2025 (20:50 IST)
Photo Credit X
ಬೆಂಗಳೂರು: ಕನ್ನಡ ಚಿತ್ರೋದ್ಯಮಕ್ಕೆ ಅಪಾರ ಕೊಡುಗೆ ನೀಡಿರುವ ದಿವಂಗತ ನಟ ವಿಷ್ಣುವರ್ಧನ್​​ಗೆ ಮರಣೋತ್ತರವಾಗಿ ಕರ್ನಾಟಕರತ್ನ ಪ್ರಶಸ್ತಿ ನೀಡುವಂತೆ  ಹಿರಿಯ ನಟಿಯರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಒತ್ತಾಯಿಸಿದರು.

ಚಲನಚಿತ್ರ ರಂಗದ ಹಿರಿಯ ನಟಿಯರಾದ ಜಯಮಾಲ, ಶ್ರತಿ ಮತ್ತು ಮಾಳವಿಕ ಅವಿನಾಶ್ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಈ ಕುರಿತು ತಮ್ಮ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿರುವ ಸಿದ್ದರಾಮಯ್ಯ, ನಟಿಯರಾದ ಜಯಮಾಲ, ಶ್ರತಿ ಮತ್ತು ಮಾಳವಿಕ ಅವಿನಾಶ್ ಅವರು ಇಂದು ನನ್ನ ಭೇಟಿಯಾಗಿ ವಿಷ್ಣುವರ್ಧನ್​ ಅವರಿಗೆ ಕರ್ನಾಟಕರತ್ನ ಪ್ರಶಸ್ತಿ ನೀಡುವಂತೆ ಮನವಿ ಸಲ್ಲಿಸಿದ್ದಾರೆ ಎಂದಿದ್ದಾರೆ.

ದಿವಂಗತ ವಿಷ್ಣುವರ್ಧನ್ ಅವರಿಗೆ 75ನೇ ವರ್ಷದ ಹುಟ್ಟುಹಬ್ಬದಂದು ಮರಣೋತ್ತರ ಕರ್ನಾಟಕ ರತ್ನ ಕೊಡಬೇಕು. ವಿಷ್ಣುವರ್ಧನ್ ಹಾಗೂ ಸರೋಜಾದೇವಿ ಅವರಿಗೆ ಕರ್ನಾಟಕ ರತ್ನ ಕೊಡಬೇಕು. ರಸ್ತೆಗೆ ಸರೋಜಾದೇವಿ ಹೆಸರು ಇಡಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದೇವೆ. ಸಚಿವ ಸಂಪುಟ ಸಭೆಯಲ್ಲಿ ಮಾತಾಡುತ್ತೇನೆ ಎಂದು ಸಿಎಂ ಹೇಳಿದ್ದಾರೆ ಎಂದು ನಟಿಯರು ಪ್ರತಿಕ್ರಿಯಿಸಿದರು.

ವಿಷ್ಣುವರ್ಧನ್ ಸರ್ ಅವರ ಅಭಿಮಾನಿಯಾಗಿ ನಾವು ಬಂದಿದ್ದೇವೆ. ಕರ್ನಾಟಕ ರತ್ನ ನೀಡಬೇಕೆಂದು ಮನವಿ ಮಾಡಿದ್ದೇವೆ. ಸರೋಜಾ ದೇವಿ ಅವರಿಗೂ ಕರ್ನಾಟಕ ರತ್ನ ಕೊಡಬೇಕು ಪಕ್ಷಾತೀತವಾಗಿ ನಾವೆಲ್ಲ ಬಂದಿದ್ದೇವೆ. ನಾವೆಲ್ಲರೂ ಕಲಾವಿದರು, ಇದರಲ್ಲಿ ರಾಜಕೀಯ ಇಲ್ಲ ಎಂದು ಶೃತಿ ಹೇಳಿದರು.

Share this Story:

Follow Webdunia kannada

ಮುಂದಿನ ಸುದ್ದಿ

Gold Smuggling Case: ಜೈಲು ಹಕ್ಕಿಯಾಗಿರುವ ನಟಿ ರನ್ಯಾ ರಾವ್‌ಗೆ ಬಿಗ್‌ ಶಾಕ್‌