Select Your Language

Notifications

webdunia
webdunia
webdunia
webdunia

ಹಿರಿಯ ನಟಿ ಪದ್ಮಾ ಕುಮುಟಾ ಇನ್ನಿಲ್ಲ

ಹಿರಿಯ ನಟಿ ಪದ್ಮಾ ಕುಮುಟಾ ಇನ್ನಿಲ್ಲ
ಬೆಂಗಳೂರು , ಮಂಗಳವಾರ, 7 ಮಾರ್ಚ್ 2017 (07:28 IST)
ಕನ್ನಡ ಚಿತ್ರರಂಗದ ಹಿರಿಯ ನಟಿ ಪದ್ಮಾ ಕುಮುಟಾ(58) ಕೊನೆಯುಸಿರೆಳೆದಿದ್ದಾರೆ.ಅವರಿಗೆ 58 ವರ್ಷ ವಯಸ್ಸಾಗಿತ್ತು.

ಸೋಮವಾರ ನಗರದಲ್ಲಿ ನಡೆಯುತ್ತಿದ್ದ 'ಮಹಾನದಿ' ಧಾರಾವಾಹಿ ಚಿತ್ರೀಕರಣದಲ್ಲಿ ತೊಡಗಿದ್ದ ಅವರಿಗೆ ಹೃದಯಾಘಾತವಾಗಿತ್ತು. ತಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.
 
ಚೋಮನದುಡಿ ಚಿತ್ರದ ನಟನೆಗಾಗಿ ರಾಷ್ಟ್ರ ಪ್ರಶಸ್ತಿ ಪಡೆದಿದ್ದ ಅವರು ದೇವತಾ ಮನುಷ್ಯ, ಶಿವ ಮೆಚ್ಚಿದ ಕಣ್ಣಪ್ಪ, ಬಯಲುದಾರಿ, ಅರಿವು, ಫಲಿತಾಂಶ, ಅವಸ್ಥೆ ಸೇರಿದಂತೆ ಹಲವಾರು ಚಿತ್ರಗಳಲ್ಲಿ ನಟಿಸಿದ್ದರು. ಇತ್ತೀಚಿಗೆ ಕಿರುತೆರೆಯಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತಿದ್ದರು. ಪದ್ಮಾ ಕುಮುಟಾ ನಿರ್ಮಿಸಿದ ಮಕ್ಕಳ ಚಿತ್ರ "ಅರಿವು" ರಾಷ್ಟ್ರ ಪ್ರಶಸ್ತಿ ಮತ್ತು ರಾಜ್ಯ ಪ್ರಶಸ್ತಿಯನ್ನು ಬಾಚಿಕೊಂಡಿತ್ತು.
 
ಅವರು ಇಬ್ಬರು ಪುತ್ರಿಯರು ಮತ್ತು ಒಬ್ಬ ಪುತ್ರನನ್ನು ಅಗಲಿದ್ದಾರೆ.
 
ಹಿರಿಯ ನಟಿಯ ಅಕಾಲಿಕ ನಿಧನಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಅತ್ಯುತ್ತಮ ನಟಿಯಾಗಿ ಐಶ್ವರ್ಯಾ ರೈ ಬಚ್ಚನ್