ಬೆಂಗಳೂರು: ಬೆಂಗಳೂರು ಮೂವೀಸ್ ಲಾಂಛನದಲ್ಲಿ ಮೂಡಿ ಬರುತ್ತಿರುವ ತಪಸ್ಸಿ ಸಿನಿಮಾದಲ್ಲಿ ಕ್ರೇಜಿಸ್ಟಾರ್ ರವಿಚಂದ್ರನ್ ಅವರು ಅಭಿನಯಿಸುತ್ತಿದ್ದಾರೆ.
ಇದೊಂದು ಮಹಿಳಾ ಪ್ರಧಾನ ಸಿನಿಮಾವಾಗಿದ್ದು, ಚಿತ್ರಕ್ಕೆ ಸ್ಪೆನ್ಸರ್ ಮ್ಯಾಥ್ಯೂ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ.
ನನ್ನ ಭಾಗದ ಚಿತ್ರೀಕರಣವಷ್ಟೇ ಬಾಕಿದ್ದು, ಅದನ್ನು ಮುಂದಿನ 6-7 ತಿಂಗಳೊಳಗೆ ಮುಗಿಸುತ್ತೇನೆ. ಮ್ಯಾಥ್ಯೂ ನನಗೆ ತುಂಬಾ ಕ್ಲೋಸ್ ಫ್ರೆಂಡ್. ತುಂಬಾ ಶಿಸ್ತಿನಿಂದ ನಡೆದುಕೊಳ್ಳುವ ವ್ಯಕ್ತಿ. ರವಿ ಬೋಪಣ್ಣ ಸಿನಿಮಾದಿಂದ ನನಗೆ ಪರಿಚಯ. ಅದಕ್ಕೂ ಮುಂಚೆಯಿಂದಲೂ ಗಾಂಧಿನಗರದಲ್ಲಿ ಇದ್ದಾರೆ. ಅವರೇ ಈ ಸ್ಟೋರಿ ಮಾಡಿದ್ದಾರೆ. ನೀವೇ ಮಾಡಬೇಕು. ಒಂದು ಸಾಮಾಜಿಕ ಸಂದೇಶ ಸಾರಬೇಕು. ತೂಕವಾದ ಪಾತ್ರ. ಇಡೀ ಸಿನಿಮಾಗೆ ನ್ಯಾಯ ಒದಗಿಸಲು ನನ್ನ ಸೆಲೆಕ್ಟ್ ಮಾಡಿದ್ದಾರೆ ಎಂದರು.
ನಿರ್ದೇಶಕ ಸ್ಪೆನ್ಸರ್ ಮ್ಯಾಥ್ಯೂ ಮಾತನಾಡಿ, ರವಿಚಂದ್ರನ್ ಸರ್ ಅವರಿಂದಲೇ ಈ ಪ್ರಾಜೆಕ್ಟ್ ಶುರುವಾಗಿದೆ. ಅವರಿಗೆ ಧನ್ಯವಾದ ಹೇಳುತ್ತೇನೆ. ಈ ಚಿತ್ರದಲ್ಲಿ ಸ್ಟ್ರಾಂಗ್ ಮೆಸೇಜ್ ಇದೆಎಂದರು.
ನೈಜ ಘಟನೆಯಾಧಾರಿತ ಮಹಿಳಾ ಪ್ರಧಾನ ಸಿನಿಮಾವಾಗಿರುವ ತಪಸ್ಸಿಯಲ್ಲಿ ಪ್ರಾಧ್ಯಾಪಕರಾಗಿ ಡಾಕ್ಟರ್ ವಿ. ರವಿಚಂದ್ರನ್ ನಟಿಸ್ತಿದ್ದು, ಅಮ್ಮಯ್ರ ಗೋಸ್ವಾಮಿ ನಾಯಕಿಯಾಗಿ ಬಣ್ಣ ಹಚ್ಚಿದ್ದಾರೆ. ವಿನಯ ಪ್ರಸಾದ್, ಪ್ರಜ್ವಲ್, ಸಚಿನ್, ಅನುಷಾ ಕಿಣಿ, ಭಾಸ್ಕರ್ ಸೇರಿದ ದೊಡ್ಡ ತಾರಾಬಳಗವಿದೆ.