ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತವಾಗಿದ್ದು, ಗಂಭೀರ ಸ್ಥಿತಿಯಲ್ಲಿ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಬೆಳಿಗ್ಗೆ 11.30 ಕ್ಕೆ ಪುನೀತ್ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಹೃದಯಾಘಾತಕ್ಕೊಳಗಾಗಿರುವ ಪುನೀತ್ ರ ಜ್ಕುಮಾರ್ ಆರೋಗ್ಯ ತೀರಾ ಗಂಭೀರವಾಗಿದೆ ಎನ್ನಲಾಗಿದೆ. ಅರ್ಧಗಂಟೆಯಲ್ಲಿ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಲಿದ್ದೇವೆ ಎಂದು ವಿಕ್ರಂ ಆಸ್ಪತ್ರೆ ಮೂಲಗಳು ಹೇಳಿವೆ.
ಇನ್ನು, ಪುನೀತ್ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಸುದ್ದಿ ಸ್ಯಾಂಡಲ್ ವುಡ್, ಅಭಿಮಾನಿಗಳಿಗೆ ಆಘಾತ ತಂದಿದ್ದು, ಇಡೀ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಆಸ್ಪತ್ರೆ ಬಳಿ ಜಮಾಯಿಸಿದ್ದಾರೆ.ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಗೆ ಹೃದಯಾಘಾತವಾಗಿದ್ದು, ಗಂಭೀರ ಸ್ಥಿತಿಯಲ್ಲಿ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇಂದು ಬೆಳಿಗ್ಗೆ 11.30 ಕ್ಕೆ ಪುನೀತ್ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದಾರೆ. ತೀವ್ರ ಹೃದಯಾಘಾತಕ್ಕೊಳಗಾಗಿರುವ ಪುನೀತ್ ರ ಜ್ಕುಮಾರ್ ಆರೋಗ್ಯ ತೀರಾ ಗಂಭೀರವಾಗಿದೆ ಎನ್ನಲಾಗಿದೆ. ಅರ್ಧಗಂಟೆಯಲ್ಲಿ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಲಿದ್ದೇವೆ ಎಂದು ವಿಕ್ರಂ ಆಸ್ಪತ್ರೆ ಮೂಲಗಳು ಹೇಳಿವೆ.
ಇನ್ನು, ಪುನೀತ್ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿರುವ ಸುದ್ದಿ ಸ್ಯಾಂಡಲ್ ವುಡ್, ಅಭಿಮಾನಿಗಳಿಗೆ ಆಘಾತ ತಂದಿದ್ದು, ಇಡೀ ಚಿತ್ರರಂಗದ ಗಣ್ಯರು, ಅಭಿಮಾನಿಗಳು ಆಸ್ಪತ್ರೆ ಬಳಿ ಜಮಾಯಿಸಿದ್ದಾರೆ.