Webdunia - Bharat's app for daily news and videos

Install App

ಯಶ್ ಟಾಕ್ಸಿಕ್ ಸಿನಿಮಾದಲ್ಲಿ ಶಾರುಖ್ ಖಾನ್

Krishnaveni K
ಮಂಗಳವಾರ, 6 ಫೆಬ್ರವರಿ 2024 (08:38 IST)
ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ನಾಯಕರಾಗಿರುವ ಟಾಕ್ಸಿಕ್ ಸಿನಿಮಾದಲ್ಲಿ ಶಾರುಖ್ ಖಾನ್ ಪ್ರಮುಖ ಪಾತ್ರವೊಂದನ್ನು ನಿರ್ವಹಿಸಲಿದ್ದಾರೆ ಎಂಬ ಸುದ್ದಿ ದಟ್ಟವಾಗಿ ಹರಡಿದೆ.
 

ಯಶ್ ಪ್ಯಾನ್ ಇಂಟರ್ ನ್ಯಾಷನಲ್ ಸಿನಿಮಾದಲ್ಲಿ ದೊಡ್ಡ ಸ್ಟಾರ್ ನಟರ ದಂಡೇ ಅಭಿನಯಿಸಲಿದೆ ಎನ್ನಲಾಗುತ್ತಿದೆ. ಇತ್ತೀಚೆಗೆ ಬಾಲಿವುಡ್ ತಾರೆ ಕರೀನಾ ಕಪೂರ್ ಪ್ರಮುಖ ಪಾತ್ರ ಮಾಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಇದಕ್ಕೆ ತಕ್ಕಂತೆ ಕರೀನಾ ಕೂಡಾ ಸದ್ಯದಲ್ಲೇ ದೊಡ್ಡ ಸುದ್ದಿ ಕೊಡುವುದಾಗಿ ಹೇಳಿದ್ದರು.

ಇದೀಗ ಶಾರುಖ್ ಖಾನ್ ಚಿತ್ರತಂಡ ಕೂಡಿಕೊಳ್ಳುವ ಬಗ್ಗೆ ಸುದ್ದಿ ಕೇಳಿಬರುತ್ತಿದೆ. ಶಾರುಖ್ ಟಾಕ್ಸಿಕ್ ಸಿನಿಮಾದಲ್ಲಿ ಅತಿಥಿ ಪಾತ್ರವೊಂದನ್ನು ನಿರ್ವಹಿಸಲಿದ್ದಾರೆ ಎನ್ನಲಾಗುತ್ತಿದೆ. ಇತ್ತೀಚೆಗೆ ಯಶ್ ಮತ್ತು ಶಾರುಖ್ ಖಾನ್ ಒಂದೇ ಸಿನಿಮಾದಲ್ಲಿ ನಟಿಸಲಿದ್ದಾರೆ ಎಂದು ಸುದ್ದಿಯಾಗಿತ್ತು. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ. ಆದರೆ ಇಂತಹದ್ದೊಂದು ಸುದ್ದಿ ಕೇಳಿಯೇ ಫ್ಯಾನ್ಸ್ ಥ್ರಿಲ್ ಆಗಿದೆ. ಇಬ್ಬರಿಗೂ ತಮ್ಮದೇ ಆದ ಫ್ಯಾನ್ಸ್ ಬಳಗವಿದೆ. ಹೀಗಿರುವಾಗ ಇಬ್ಬರೂ ಜೊತೆಯಾದರೆ ಥಿಯೇಟರ್ ನಲ್ಲಿ ಹಬ್ಬವಾಗುವುದು ಗ್ಯಾರಂಟಿ.

ಕೆವಿಎನ್ ಪ್ರೊಡಕ್ಷನ್ಸ್ ನಿರ್ಮಾಣ ಮಾಡುತ್ತಿರುವ ಬಹುಕೋಟಿ ವೆಚ್ಚದ ಟಾಕ್ಸಿಕ್ ಸಿನಿಮಾದಲ್ಲಿ ಸ್ಟಾರ್ ಕಲಾವಿದರೊಬ್ಬರು ಅತಿಥಿ ಪಾತ್ರ ಮಾಡಬೇಕಾಗುತ್ತದೆ. ಈ ಪಾತ್ರಕ್ಕೆ ಶಾರುಖ್ ರನ್ನೇ ಕರೆತರಲು ಪ್ರಯತ್ನ ನಡೆದಿದೆ ಎನ್ನಲಾಗಿದೆ.  ಈ ಸಿನಿಮಾವನ್ನು ಕೆಜಿಎಫ್ 2 ಗಿಂತಲೂ ದೊಡ್ಡ ಮಟ್ಟದಲ್ಲಿ ಹೊರತರಲು ಚಿತ್ರತಂಡ ಶ್ರಮಿಸುತ್ತಿದೆ.

ಶಾರುಖ್ ಖಾನ್ ಇದುವರೆಗೆ ಸೌತ್ ಸಿನಿಮಾಗಳಲ್ಲಿ ಅದರಲ್ಲೂ ಅತಿಥಿ ಪಾತ್ರದಲ್ಲಿ ನಟಿಸಿದ್ದೇ ಇಲ್ಲ. ಆದರೆ ಯಶ್ ಸಿನಿಮಾವೆಂದರೆ ಕ್ರೇಜ್ ಕೂಡಾ ದೊಡ್ಡ ಮಟ್ಟದಲ್ಲಿದೆ. ಹೀಗಾಗಿ ಯಶ್ ಜೊತೆ ನಟಿಸುವ ಅವಕಾಶವನ್ನು ಶಾರುಖ್ ಒಪ್ಪಿಕೊಳ್ಳುತ್ತಾರಾ ಎಂದು ಕಾದು ನೋಡಬೇಕಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮುಂದಿನ ಸುದ್ದಿ
Show comments