Webdunia - Bharat's app for daily news and videos

Install App

ಶಾರ್ದೂಲ ಚಿತ್ರಕ್ಕೆ ಸಂಚಿತ್ ಹೆಗಡೆ ಹಾಡಿಗೆ ಅಭಿಮಾನಿಗಳು ಫಿದಾ!

Webdunia
ಭಾನುವಾರ, 25 ಜುಲೈ 2021 (14:22 IST)
ತಮ್ಮ ಅಮೋಘ ಕಂಠದಿಂದ ಕೇಳುಗರ ಮನಗೆದ್ದಿರುವ ಸಂಚಿತ್ ಹೆಗಡೆ ಅವರ ಕಂಠಸಿರಿಯಲ್ಲಿ ಮೂಡಿಬಂದಿರುವ ಶಾರ್ದೂಲ ಚಿತ್ರದ ಒಂದು ಸಣ್ಣ ತಪ್ಪನ್ನು ಮಾಡಿ ಬಿಡಲೇ ನಾನು..  ಹಾಡಿನ ಲಿರಿಕಲ್ ವಿಡಿಯೋ ಇತ್ತೀಚೆಗೆ ಬಿಡುಗಡೆಯಾಗಿದ್ದು, ಮೆಚ್ಚುಗೆ ವ್ಯಕ್ತವಾಗಿದೆ.
ಆನಂದ್ ಆಡಿಯೋ ಧ್ವನಿಸುರಳಿಯನ್ನು ಹೊರ ತಂದಿದ್ದು, ಅರವಿಂದ್ ಕೌಶಿಕ್ ಬರೆದಿರುವ ಈ ಹಾಡಿಗೆ
ಸತೀಶ್ ಬಾಬು ಸಂಗೀತ ನೀಡಿದ್ದಾರೆ. ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಅರವಿಂದ್ ಕೌಶಿಕ್ ನಿರ್ದೇಶಿಸಿದ್ದಾರೆ. ನಿರ್ದೇಶಕರೇ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದಿರುವ ಈ ಚಿತ್ರಕ್ಕೆ ದೆವ್ವ ಇರಬಹುದಾ? ಎಂಬ ಅಡಿಬರಹವಿದೆ.
ಭೈರವ ಸಿನಿಮಾಸ್ ಮತ್ತು ಸಿ ವಿ ಆರ್ ಸಿನಿಮಾಸ್ ಲಾಂಛನದಲ್ಲಿ ರೋಹಿತ್ ಶಾಂತಪ್ಪ ಹಾಗೂ ಕಲ್ಯಾಣ್ ಸಿ ನಿರ್ಮಿಸಿರುವ ಈ ಚಿತ್ರ ಆಗಸ್ಟ್ ವೇಳೆಗೆ ತೆರೆಗೆ ಬರುವ ಸಾಧ್ಯತೆಯಿದೆ. ಈ ಹಿಂದೆ ನಮ‌್ ಏರಿಯಲ್ಲೊಂದು‌ ದಿನ, ತುಘಲಕ್ ಹಾಗೂ ಹುಲಿರಾಯ ಚಿತ್ರಗಳನ್ನು ಅರವಿಂದ್ ಕೌಶಿಕ್ ನಿರ್ದೇಶಿಸಿದ್ದರು.
ವೈ.ಜಿ.ಆರ್ ಮನು ಛಾಯಾಗ್ರಹಣ, ಸತೀಶ್ ಬಾಬು ಸಂಗೀತ ನಿರ್ದೇಶನ, ಶಿವರಾಜ್ ಮೇಹು ಸಂಕಲನ ಹಾಗು ಮಾಸ್ ಮಾದ, ವೈಲೆಂಟ್ ವೇಲು ಮತ್ತು ಅಲ್ಟಿಮೇಟ್ ಶಿವು ಅವರ‌ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ..
ಪಿ.ಯು.ಸಿ ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿದ ಚೇತನ್ ಚಂದ್ರ, ನಿರ್ದೇಶಕ, ನಟ ರವಿತೇಜ, ಕೃತಿಕ ರವೀಂದ್ರ, ಐಶ್ವರ್ಯ ಪ್ರಸಾದ್, ಕಲ್ಯಾಣ್, ಹೃಷಿಕೇಶ್, ಮಹೇಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ..

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬದುಕು ಹೇಗೇ ಕಟ್ಟಿಕೊಳ್ಳಬೇಕೆಂಬುದು ಹೆಣ್ಣಿನ ಆಯ್ಕೆ: ರಾಗಿಣಿ ದ್ವಿವೇದಿ

ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್: ದೇವರಕೊಂಡ, ಪ್ರಕಾಶ್ ರಾಜ್, ಶ್ರೀಲೀಲಾ ಸೇರಿದಂತೆ ಹಲವರಿಗೆ ಇಡಿ ಶಾಕ್‌

Amruthadhare: ಗೌತಮ್, ಭೂಮಿಕಾಗೆ ಮಗುವಾಯ್ತು: ವೀಕ್ಷಕರ ಕಾಮೆಂಟ್ ನೋಡಿದ್ರೆ ನಗುವೋ ನಗು

ಕೋರ್ಟ್ ಗೆ ಹೋಗೋ ಮುಂಚೆ ನಟ ದರ್ಶನ್ ಭರ್ಜರಿ ಪೂಜೆ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

ಮುಂದಿನ ಸುದ್ದಿ
Show comments