ಬೆಂಗಳೂರು: ಬಾಲಿವುಡ್ ನಟಿ, ಕರಾವಳಿ ಬೆಡಗಿ ಶಿಲ್ಪಾ ಶೆಟ್ಟಿ ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ ಕೆಡಿಯಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ.
ಧ್ರುವ ಸರ್ಜಾ ನಾಯಕರಾಗಿರುವ ಕೆಡಿ ಸಿನಿಮಾದಲ್ಲಿ ಶಿಲ್ಪಾ ಸತ್ಯವತಿ ಎನ್ನುವ ಪಾತ್ರ ಮಾಡುತ್ತಿದ್ದಾರೆ. ಅವರ ಪಾತ್ರದ ಫಸ್ಟ್ ಲುಕ್ ಈಗಾಗಲೇ ಬಿಡುಗಡೆಯಾಗಿತ್ತು.
ಇದೀಗ ಶಿಲ್ಪಾ ಕೆಡಿ ಶೂಟಿಂಗ್ ನಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬಂದಿಳಿದಿದ್ದಾರೆ. ಮುಂಬೈ ವಿಮಾನ ನಿಲ್ದಾಣದಿಂದ ಅವರು ಬೆಂಗಳೂರಿನತ್ತ ಪ್ರಯಾಣಿಸುವ ವಿಡಿಯೋಗಳು ವೈರಲ್ ಆಗಿವೆ.