Publish Date: Tue, 02 Apr 2024 (12:19 IST)
Updated Date: Tue, 02 Apr 2024 (12:23 IST)
ಬೆಂಗಳೂರು: ತೀವ್ರ ಸುಸ್ತಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದು ನಟ ಶಿವರಾಜ್ ಕುಮಾರ್ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಅಷ್ಟಕ್ಕೂ ಶಿವಣ್ಣನಿಗೆ ಆಗಿದ್ದೇನು ಇಲ್ಲಿದೆ ಮಾಹಿತಿ.
ಚುನಾವಣೆ ಸಮಯದಲ್ಲಿ ಪತ್ನಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಪ್ರಚಾರ ನಡೆಸಲು ಶಿವಮೊಗ್ಗ ಕ್ಷೇತ್ರದಲ್ಲಿ ಶಿವಣ್ಣ ಸತತವಾಗಿ ಓಡಾಡಿದ್ದರು. ಉರಿಬಿಸಿಲಿನಲ್ಲಿ ರೋಡ್ ಶೋ, ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಇದರಿಂದಾಗಿ ಅವರು ತೀವ್ರ ಸುಸ್ತಾಗಿದ್ದರು.
ಈ ಕಾರಣಕ್ಕೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಸುಸ್ತು ಜೊತೆಗೆ ಕಿಡ್ನಿ ಸ್ಟೋನ್ ಸಮಸ್ಯೆಯಾಗಿತ್ತು ಎನ್ನಲಾಗಿದೆ. ನಿನ್ನೆ ಶಿವಣ್ಣ ಆಸ್ಪತ್ರೆಗೆ ದಾಖಲಾಗಿದ್ದರು. ಎಲ್ಲಾ ರೀತಿಯ ವೈದ್ಯಕೀಯ ಪರೀಕ್ಷೆ ನಡೆಸಲು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಇಂದು ಬೆಳಿಗ್ಗೆಯೇ ಅವರ ಸ್ನೇಹಿತ ಚಿ.ಗುರುದತ್ ಆಸ್ಪತ್ರೆಗೆ ಭೇಟಿ ನೀಡಿ ಶಿವಣ್ಣನ ಆರೋಗ್ಯ ವಿಚಾರಿಸಿ ತೆರಳಿದ್ದರು. ಇದೀಗ ಚೇತರಿಸಿಕೊಂಡಿರುವ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ. ಸದ್ಯಕ್ಕೆ ವಿಶ್ರಾಂತಿ ಪಡೆದು ಚುನಾವಣೆ, ಶೂಟಿಂಗ್ ಕೆಲಸಗಳಲ್ಲಿ ಭಾಗಿಯಾಗಲಿದ್ದಾರೆ ಎನ್ನಲಾಗಿದೆ.