ನನ್ನ ವಿರುದ್ಧ ಕಂಪ್ಲೇಂಟ್ ಆಗಿದೆ ಎಂದು ಗೊತ್ತೇ ಇಲ್ಲ: ಶಿವರಾಜ್ ಕುಮಾರ್

Krishnaveni K
ಸೋಮವಾರ, 25 ಮಾರ್ಚ್ 2024 (10:36 IST)
Photo Courtesy: Twitter
ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಗೀತಾ ಶಿವರಾಜ್ ಕುಮಾರ್ ಸ್ಪರ್ಧಿಸುತ್ತಿದ್ದಾರೆ. ಪತ್ನಿ ಪರ ಶಿವಣ್ಣ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ.

ಈ ನಡುವೆ ಬಿಜೆಪಿ ಚುನಾವಣಾ ಆಯೋಗಕ್ಕೆ ಶಿವರಾಜ್ ಕುಮಾರ್ ವಿರುದ್ಧ ದೂರು ನೀಡಿದೆ. ಪತ್ನಿ ಗೀತಾ ಪರ ಚುನಾವಣಾ ಪ್ರಚಾರ ನಡೆಸುತ್ತಿರುವುದಲ್ಲದೆ, ಕಾಂಗ್ರೆಸ್ ಸಭೆಗಳಲ್ಲಿ ಪಾಲ್ಗೊಳ್ಳುತ್ತಿರುವ ಕಾರಣಕ್ಕೆ ಶಿವಣ್ಣ ಸಿನಿಮಾಗಳು, ಜಾಹೀರಾತುಗಳನ್ನು ಚುನಾವಣೆ ಮುಗಿಯುವವರೆಗೆ ಬ್ಯಾನ್ ಮಾಡಬೇಕು ಎಂದು ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿತ್ತು.

ಈ ಬಗ್ಗೆ ಮಾಧ್ಯಮಗಳು ಪ್ರಶ್ನಿಸಿದಾಗ ಶಿವರಾಜ್ ಕುಮಾರ್ ನನ್ನ ವಿರುದ್ಧ ದೂರು ದಾಖಲಾಗಿದೆ ಎಂದು ತಾಯಾಣೆಗೂ ನನಗೆ ಗೊತ್ತಿರಲಿಲ್ಲ ಎಂದಿದ್ದಾರೆ.  ನನಗೆ ತಾಯಾಣೆ ಈ ವಿಚಾರ ಗೊತ್ತಿಲ್ಲ. ಇದನ್ನು ಲೀಗಲ್ ಟೀಂ ನೋಡಿಕೊಳ್ಳುತ್ತದೆ ಎಂದು ಶಿವರಾಜ್ ಕುಮಾರ್ ಹೇಳಿದ್ದಾರೆ.

ಇನ್ನು, ಇತ್ತೀಚೆಗೆ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆಯವರು ಪುನೀತ್ ರಾಜ್ ಕುಮಾರ್ ನಿವಾಸಕ್ಕೆ ತೆರಳಿ, ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನು ಭೇಟಿಯಾದ ಬಗ್ಗೆ ಪ್ರಶ್ನಿಸಿದಾಗ ‘ಯಾರು ಯಾರನ್ನು ಬೇಕಾದ್ರೂ ಭೇಟಿಯಾಗಬಹುದು. ಅದರಲ್ಲಿ ತಪ್ಪೇನಿದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಶಾರುಖ್‌ಖಾನ್ ಪುತ್ರನ ಇದೆಂಥಾ ದುರ್ವರ್ತನೆ, ವಿಡಿಯೋ ವೈರಲ್

ಸಮಂತಾ ಮದುವೆ ಬೆನ್ನಲ್ಲೇ ನಾಗಚೈತನ್ಯ ಜತೆಗಿನ ವಿಶೇಷ ಕ್ಷಣದ ವಿಡಿಯೋ ಹಂಚಿಕೊಂಡ ಶೋಭಿತಾ

ಭಾರತದ ಜನಪ್ರಿಯ ಸ್ಟಾರ್‌ಗಳ ಟಾಪ್‌ 10​ ಪಟ್ಟಿಯಲ್ಲಿ ಕನ್ನಡದ ಮೂವರು: ಯಾರವರು ಇಲ್ಲಿದೆ ಮಾಹಿತಿ

ಸುದೀಪ್ ಮಗಳಿಗೆ ಗುಟ್ಟಾಗಿ ಮದೆಯಾಯಿತಾ, ವೈರಲ್ ಫೋಟೋ ಹಿಂದಿನ ಅಸಲಿಯತ್ತೇನು

ದರ್ಶನ್‌ಗೆ ಬಿಗ್‌ ಶಾಕ್, ಮನೆಯಲ್ಲಿ ಪತ್ತೆಯಾಗಿದ್ದ ₹82 ಲಕ್ಷ ಹಣ ಸದ್ಯ ಕೊಡಕ್ಕಾಗಲ್ಲ ಎಂದ ಕೋರ್ಟ್‌

ಮುಂದಿನ ಸುದ್ದಿ
Show comments