ಪತ್ನಿ ಕೆಲಸ ಮಾಡದಿದ್ರೆ ಹೆಸರು ಚೇಂಜ್ ಮಾಡ್ತೀನಿ ಎಂದ ಶಿವರಾಜ್ ಕುಮಾರ್

Krishnaveni K
ಮಂಗಳವಾರ, 26 ಮಾರ್ಚ್ 2024 (11:23 IST)
ಬೆಂಗಳೂರು: ಶಿವಮೊಗ್ಗ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿರುವ ಪತ್ನಿ ಗೀತಾ ಶಿವರಾಜ್ ಕುಮಾರ್ ಪರವಾಗಿ ಶಿವಣ್ಣ ಪ್ರಚಾರ ನಡೆಸುತ್ತಿದ್ದಾರೆ.

ಈ ಬಾರಿ ಪತ್ನಿ ಗೀತಾರನ್ನು ಗೆಲ್ಲಿಸಿಯೇ ತೀರುವುದಾಗಿ ಹಠಕ್ಕೆ ಬಿದ್ದಿರುವ ಶಿವಣ್ಣ ಶಿವಮೊಗ್ಗದಲ್ಲಿ ಬಿರುಸಿನ ಪ್ರಚಾರ ನಡೆಸುತ್ತಿದ್ದಾರೆ. ಹಲವು ಸಾರ್ವಜನಿಕ ಸಭೆಗಳಲ್ಲಿ ಮಾತನಾಡುತ್ತಿದ್ದಾರೆ. ಈ ವೇಳೆ ಪತ್ನಿ ಪರವಾಗಿ ಶಿವಣ್ಣ ಸವಾಲೊಂದನ್ನು ಹಾಕಿಕೊಂಡಿದ್ದಾರೆ.

‘ಗೀತಾಗೆ ಒಮ್ಮೆ ಅವಕಾಶ ಕೊಟ್ಟು ನೋಡಿ. ಆಕೆ ಖಂಡಿತಾ ನಿಮಗಾಗಿ ಕೆಲಸ ಮಾಡುತ್ತಾರೆ. ಆ ಬಳಿಕವೂ ನೀವು ಸರಿಯಾದ ಅಭ್ಯರ್ಥಿಯನ್ನು ಆಯ್ಕೆ ಮಾಡಿಲ್ಲ ಎನಿಸಿದರೆ ನನ್ನ ಹೆಸರು ಚೇಂಜ್ ಮಾಡಿಕೊಳ್ಳುತ್ತೇನೆ. ಮಾತು ಕೊಟ್ಟ ಮೇಲೆ ಅದನ್ನು ಖಂಡಿತಾ ಪಾಲಿಸುತ್ತೇವೆ’ ಎಂದಿದ್ದಾರೆ.

ಪತ್ನಿ ಪರವಾಗಿ ಶಿವಣ್ಣ ಜನರಿಗೆ ಭರವಸೆ ನೀಡಿದ್ದಾರೆ. ಗೀತಾ ಪರ ಪ್ರಚಾರಕ್ಕೆ ಮುಂದಿನ ದಿನಗಳಲ್ಲಿ ಸ್ಯಾಂಡಲ್ ವುಡ್ ನ ಕೆಲವು ಕಲಾವಿದರೂ ಬರುವ ನಿರೀಕ್ಷೆಯಿದೆ. ಶಿವಮೊಗ್ಗದಲ್ಲಿ ಗೀತಾ ಬಿಜೆಪಿ ಅಭ್ಯರ್ಥಿ ಬಿವೈ ರಾಘವೇಂದ್ರ ವಿರುದ್ಧ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಅವರಿಗೆ ಗೆಲುವು ಸುಲಭವಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚಾಮುಂಡಿ ತಾಯಿ ದರ್ಶನ ಪಡೆದು ಫ್ಯಾನ್ಸ್ ವಾರ್ ಬಗ್ಗೆ ರಿಷಬ್ ಶೆಟ್ಟಿ ಹೇಳಿದ ಮಾತು ನೋಡಿದ್ರೆ ಹೆಮ್ಮೆ ಅನಿಸಬಹುದು

ಜನಪ್ರಿಯ ಧಾರಾವಾಹಿ ಮಹಾಭಾರತದ ಕರ್ಣ ಪಾತ್ರಧಾರಿ ಪಂಕಜ್ ಧೀರ್ ಇನ್ನಿಲ್ಲ

ಮದುವೆ ಬಗ್ಗೆ ಬಿಗ್‌ ಅಪ್‌ಡೇಟ್‌ ನೀಡಿದ ಸ್ಯಾಂಡಲ್‌ವುಡ್‌ ಡಿಂಪಲ್‌ ಕ್ವೀನ್‌ ರಚಿತಾರಾಮ್‌

ಜಿಯೋ ಹಾಟ್‌ಸ್ಟಾರ್ ಸರ್ವರ್‌ ದಿಢೀರ್‌ ಡೌನ್‌: ಸರ್ಚ್‌ ಬಟನ್‌ ನಾಪತ್ತೆ, ಚಂದಾದಾರರ ಪರದಾಟ

ಎರಡನೇ ಮದುವೆಗೆ ಸಜ್ಜಾದ ರಘು ದೀಕ್ಷಿತ್: ಹುಡುಗಿ ಕೂಡಾ ಫೇಮಸ್, ವಯಸ್ಸಿನ ಅಂತರ ಎಷ್ಟು ಗೊತ್ತಾ

ಮುಂದಿನ ಸುದ್ದಿ
Show comments