Webdunia - Bharat's app for daily news and videos

Install App

ಯುವರಾಜ್ ಕುಮಾರ್ ವಿಚ್ಛೇದನದ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದ ಶಿವರಾಜ್ ಕುಮಾರ್

Krishnaveni K
ಸೋಮವಾರ, 10 ಜೂನ್ 2024 (16:22 IST)
ಬೆಂಗಳೂರು: ದೊಡ್ಮನೆ ಕುಡಿ ಯುವರಾಜ್ ಕುಮಾರ್ ವಿಚ್ಛೇದನ ವದಂತಿ ಈಗ ಭಾರೀ ಸದ್ದು ಮಾಡುತ್ತಿದೆ. ಯುವ ತಮ್ಮ ಪತ್ನಿ ಶ್ರೀದೇವಿಗೆ ವಿಚ್ಛೇದನ ನೋಟಿಸ್ ನೀಡಿದ್ದಾರೆ ಎಂದು ಸುದ್ದಿಯಾಗಿದೆ. ಈ ಬಗ್ಗೆ ಶಿವರಾಜ್ ಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಯುವರಾಜ್ ಕುಮಾರ್ ಮತ್ತು ಶ್ರೀದೇವಿ ಪ್ರೀತಿಸಿ ನಾಲ್ಕು ವರ್ಷಗಳ ಹಿಂದೆ ಮದುವೆಯಾಗಿದ್ದರು. ಆದರೆ ಈಗ ದಂಪತಿ ನಡುವೆ ಮನಸ್ತಾಪವೇರ್ಪಟ್ಟಿದ್ದು ಕಳೆದ ಆರು ತಿಂಗಳಿನಿಂದ ಬೇರೆ ಬೇರೆಯಾಗಿದ್ದಾರೆ ಎನ್ನಲಾಗಿದೆ. ಇದೀಗ ಯುವ ವಿಚ್ಛೇದನ ನೋಟಿಸ್ ನೀಡಿದ್ದು, ಇದರಲ್ಲಿ ತಮ್ಮ ಪತ್ನಿ ಮಾನಸಿಕ ಕ್ರೌರ್ಯ ನೀಡಿದ್ದಾರೆ ಎಂದು ಆಪಾದಿಸಿದ್ದಾರೆ.

ಶ್ರೀದೇವಿ ಸದ್ಯಕ್ಕೆ ವಿದೇಶಕ್ಕೆ ತೆರಳಿದ್ದಾರೆ. ಇನ್ನೂ ಅವರು ಯುವ ನೋಟಿಸ್ ಗೆ ಉತ್ತರ ನೀಡಿಲ್ಲ. ಡಾ ರಾಜ್ ಕುಮಾರ್ ಕುಟುಂಬದಲ್ಲಿ ಈ ರೀತಿ ವಿಚ್ಛೇದನವರೆಗೆ ತಲುಪುತ್ತಿರುವುದು ಇದೇ ಮೊದಲು. ಈ ಬಗ್ಗೆ ಶಿವರಾಜ್ ಕುಮಾರ್ ರನ್ನು ಮಾಧ್ಯಮಗಳು ಪ್ರಶ್ನಿಸಿವೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು ‘ನನಗೆ ಈ ಬಗ್ಗೆ ಮಾಹಿತಿಯಿಲ್ಲ. ಮಾಹಿತಿ ಇಲ್ಲದೇ ಮಾತನಾಡುವುದು ಸರಿಯಲ್ಲ. ಮೊಬೈಲ್ ನಲ್ಲಿ ನೋಡಿ ತಿಳಿದುಕೊಂಡೆ. ಆ ರೀತಿ ಏನಾದರೂ ಆಗಿದ್ದರೆ ಮನಸ್ಸಿಗೆ ನೋವಾಗುತ್ತದೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಕ್ರಮ ಚಿನ್ನ ಸಾಗಣೆ ಪ್ರಕರಣ: ಬೆಚ್ಚಿಬೀಳಿಸುತ್ತೆ ರನ್ಯಾ ರಾವ್‌ ಮಾಸ್ಟರ್ ಮೈಂಡ್‌

ಎಕ್ಕ ಬಿಡುಗಡೆಗೆ ದಿನಗಣನೆ ಮಾಡುತ್ತಿರುವಾಗಲೇ ಮಂತ್ರಾಲಯಕ್ಕೆ ಯುವ ರಾಜ್‌ಕುಮಾರ್ ಭೇಟಿ

ಶೆಫಾಲಿ ಮರಣದ ಕೆಲ ಗಂಟೆಗಳಲ್ಲೇ ನಾಯಿ ಜತೆ ಪರಾಗ್ ವಾಕಿಂಗ್‌: ಕಾರಣ ಬಿಚ್ಚಿಟ್ಟ ಆಪ್ತ ಸ್ನೇಹಿತ

ಪೃಥ್ವಿ ಭಟ್ ರನ್ನು ಕ್ಷಮಿಸಿದ್ರಾ ಅಪ್ಪ, ಅಮ್ಮ: ಮದುವೆ ಬಳಿಕ ಏನಾಗಿದೆ ಎಲ್ಲವೂ ಬಹಿರಂಗ

ಪಂಜಾಬಿ ನಟಿ ತಾನಿಯಾ ಮಲತಂದೆ ಮೇಲೆ ಹಲ್ಲೆ, ಆರೋಗ್ಯ ಸ್ಥಿತಿ ಗಂಭೀರ

ಮುಂದಿನ ಸುದ್ದಿ
Show comments