ಮುಂಬರುವ Viu (ವಿಯು) ಸೆಲೆಬ್ರಿಟಿಯಲ್ಲಿ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್

Webdunia
ಗುರುವಾರ, 8 ಫೆಬ್ರವರಿ 2018 (18:16 IST)
ನಂ.1 ಯಾರಿ ವಿತ್ ರಾಣಾ ಕಾರ್ಯಕ್ರಮದ ಅಭೂತಪೂರ್ವ ಯಶಸ್ಸಿನ ಬಳಿಕ ವಿಯು ಇದೀಗ ಮತ್ತೆ ಟ್ರ್ಯಾಕ್ ಗೆ ಮರಳಿದ್ದು, ಇದೀಗ ಕರ್ನಾಟಕದ ಕಣ್ಮಣಿ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ರೊಂದಿಗೆ ಟಾಕ್ ಶೋ ಅನ್ನು ಆಯೋಜಿಸಲಾಗಿದೆ.
 ಶಿವರಾಜ್ ಕುಮಾರ್ ಜೊತೆ ‘ನಂ.1 ಯಾರೀ ವಿತ್ ಶಿವಣ್ಣ’ ಎಂಬ ಕಾರ್ಯಕ್ರಮವನ್ನು ನಡೆಸಲಿದೆ. ಈ ಕಾರ್ಯಕ್ರಮದಲ್ಲಿ ಸೆಲೆಬ್ರಿಟಿ ಗಳ ನಿಜಜೀವನ ಮತ್ತು ಅವರ ಸ್ನೇಹಿತರೊಂದಿಗೆ ಮಾತುಕತೆ ನಡೆಯಲಿದೆ.
ಸ್ಯಾಂಡಲ್ ವುಡ್ ನ ಸೂಪರ್ ಸ್ಟಾರ್ ಶಿವರಾಜ್ ಕುಮಾರ್ ಹಲವಾರು ಸಿನಿಮಾಗಳಲ್ಲಿ ನಟಿಸಿದ್ದು, ಈ ಎಲ್ಲಾ ಚಿತ್ರಗಳೂ ಸೂಪರ್ ಹಿಟ್ ಆಗಿವೆ. ಈ ಕಾರ್ಯಕ್ರಮದಲ್ಲಿ ಸೆಲೆಬ್ರಿಟಿಗಳು ಉತ್ತಮವಾದ  ಮಾತುಕಥೆ ನಡೆಸುತ್ತಾ ಆಟವಾಡುತ್ತಾ ವೀಕ್ಷಕರನ್ನು ಮನರಂಜಿಸಲಿದ್ದಾರೆ. 
ಈ ಕಾರ್ಯಕ್ರಮದಲ್ಲಿ ಉಪೇಂದ್ರ, ಶ್ರುತಿ‌ ಹರಿಹರನ್, ಶ್ರದ್ಧಾ ಶ್ರೀನಾಥ್, ಹಾಗೂ ಶಿವರಾಜ್ ಕುಮಾರ್ ಸ್ನೇಹಿತರು ಹಾಗೂ ವೀಕ್ಷಕರು ಕಾರ್ಯಕ್ರಮದಲ್ಲಿ ಜೊತೆಯಾಗಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಹಲವು ಸ್ಪೆಷಲ್‌ ವೀಡಿಯೊಗಳನ್ನು ಆನಂದಿಸಬಹುದಾಗಿದೆ.
 
ಈ ಕಾರ್ಯಕ್ರಮವು ವಿಯು ಆ್ಯಾಪ್ ನಲ್ಲಿ ಪ್ರಸಾರವಾಗಲಿದ್ದು, ಅಲ್ಲದೇ ಸ್ಟಾರ್ ಸುವರ್ಣ ಚಾನೆಲ್ ನಲ್ಲೂ ಪ್ರಸಾರವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments