Webdunia - Bharat's app for daily news and videos

Install App

ಕಿರುತೆರೆಗೆ ಬರುತ್ತಾರಂತೆ ಶಿವರಾಜ್ ಕುಮಾರ್

Webdunia
ಬುಧವಾರ, 22 ಜೂನ್ 2016 (08:59 IST)
ಸಿನಿಮಾ ತಾರೆಯರು ಕಿರುತೆರೆಯಲ್ಲಿ ಕಾಣಿಸಿಕೊಳ್ಳೋದು  ಹೊಸದೇನಲ್ಲ. ಈಗಾಗಗಲೇ ಅನೇಕ ಸಿನಿಮಾ ತಾರೆಯರು ಕಿರುತೆರೆ ಹಾಗೇ ಬೆಳ್ಳಿತೆರೆಯಲ್ಲೂ ಮಿಂಚುತ್ತಿದ್ದಾರೆ. ಸ್ಯಾಂಡಲ್ ವುಡ್ ತಾರೆಯರಾದ ಕಿಚ್ಚ ಸುದೀಪ್, ರಮೇಶ್ ಅರವಿಂದ್, ಗಣೇಶ್, ವಿಜಯ್ ರಾಘವೇಂದ್ರ, ಸೃಜನ್ ಲೋಕೇಶ್ , ಶೃತಿ ಹರಿಹರನ್, ಶರ್ಮೀಳಾ ಮಾಡ್ರೆ, ದಿಗಂತ್ ಅನೇಕರು ಕಿರುತೆರೆಯಲ್ಲೂ ಸೈ ಅನ್ನಿಸಿಕೊಂಡಿದ್ದಾರೆ. ಈಗ ಮತ್ತೊಬ್ಬ ತಾರೆ ಕಿರುತೆರೆಗೆ ಎಂಟ್ರಿ ಕೊಡುತ್ತಿದ್ದಾರೆ.

ಅಂದ್ಹಾಗೆ ಈ ಬಾರಿ ಕಿರುತೆರೆಗೆ ಬರುತ್ತಿರೋದು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು. ಈ ಹಿಂದೆ ಹ್ಯಾಟ್ರಿಕ್‌ ಹೀರೋ ಶಿವರಾಜ್ ಕುಮಾರ್ ಜೀ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ 'ನಾನಿರುವುದೆ ನಿಮಗಾಗಿ' ಎಂಬ ಕಾರ್ಯಕ್ರಮ ನಡೆಸಿಕೊಡುತ್ತಿದ್ದರು. ಆದ್ರೆ ಆ ಬಳಿಕ ಅವರು ಕಿರುತೆರೆಯಲ್ಲಿ ಕಾಣಿಸಿಕೊಳ್ಳಲೇ ಇಲ್ಲ. ಇದೀಗ ಉದಯ ಟಿವಿಯಲ್ಲಿ ಮೂಡಿ ಬರಲಿರುವ 'ಕಿಕ್' ಅನ್ನೋ ಡ್ಯಾನ್ಸ್  ಕಾರ್ಯಕ್ರಮಕ್ಕೆ ಶಿವಣ್ಣ ಮಹಾ ಗುರುವಾಗಿ ಹಾಗೂ ತೀರ್ಪುಗಾರರಾಗಿ ಭಾಗವಹಿಸುತ್ತಿದ್ದಾರಂತೆ. ಜೊತೆಗೆ ನೃತ್ಯ ನಿರ್ದೇಶಕ ಹರ್ಷ ಮತ್ತು ರಚಿತಾ ರಾಮ್ ಸಹ ಶಿವಣ್ಣನಿಗೆ ಸಾಥ್ ನೀಡುತ್ತಿದ್ದಾರೆ.
 
ಅಂದ್ಹಾಗೆ ಈ ಕಾರ್ಯಕ್ರಮದ ನಿರೂಪಣೆಯನ್ನು ಅಕುಲ್ ಬಾಲಾಜಿ ಅವರು ಮಾಡಲಿದ್ದಾರಂತೆ. ಇವರು ಮೂರನೇ ಚಾನಲ್ನದಲ್ಲಿ ಸತತವಾಗಿ ಡ್ಯಾನ್ಸ್ ಕಾರ್ಯಕ್ರಮವೊಂದನ್ನು ನಿರೂಪಿಸುವುದಕ್ಕೆ ಸಜ್ಜಾಗಿದ್ದಾರೆ ಎನ್ನುವುದು ವಿಶೇಷ. ಈಗಾಗಲೇ ಈ ಕಾರ್ಯಕ್ರಮದ ಪ್ರೋಮೋ ಶೂಟಿಂಗ್ ಶುರುವಾಗಿದೆಯಂತೆ. ಮುಂದಿನ ತಿಂಗಳು ಅಂದರೆ ಜುಲೈನಲ್ಲಿ ಪ್ರಾರಂಭವಾಗುವ ಸಾಧ್ಯತೆ ಇದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments