Shivanna: ಕಮಲ್ ಹಾಸನ್ ವಿವಾದವನ್ನು ಯಾಕೆ ದೊಡ್ಡದು ಮಾಡ್ತೀರಾ: ಶಿವರಾಜ್ ಕುಮಾರ್

Krishnaveni K
ಗುರುವಾರ, 29 ಮೇ 2025 (09:03 IST)
ಬೆಂಗಳೂರು: ಕಮಲ್ ಹಾಸನ್ ಕನ್ನಡ ವಿವಾದದ ಬಗ್ಗೆ ಪ್ರತಿಕ್ರಿಯಿಸಿರುವ ನಟ ಶಿವರಾಜ್ ಕುಮಾರ್ ಅದೊಂದು ಸಣ್ಣ ವಿಚಾರ ಯಾಕೆ ದೊಡ್ಡದು ಮಾಡ್ತೀರಾ ಎಂದು ಪ್ರತಿಕ್ರಿಯಿಸಿದ್ದಾರೆ.

ಥಗ್ಸ್ ಆಫ್ ಲೈಫ್ ಸಿನಿಮಾ ಈವೆಂಟ್ ನಲ್ಲಿ ಶಿವಣ್ಣ ಎದುರೇ ಕಮಲ್ ಹಾಸನ್ ತಮಿಳಿನಿಂದ ಕನ್ನಡ ಹುಟ್ಟಿದೆ ಎಂದಿರುವುದು ವಿವಾದಕ್ಕೆ ಕಾರಣವಾಗಿದೆ. ಕಮಲ್ ಹಾಸನ್ ವಿರುದ್ಧ ಭಾರೀ ಪ್ರತಿಭಟನೆ ನಡೆಯುತ್ತಿದ್ದು ಕ್ಷಮೆಗೆ ಆಗ್ರಹಿಸುತ್ತಿದ್ದಾರೆ.

ಇದೀಗ ಅಂದು ವೇದಿಕೆಯಲ್ಲಿದ್ದ ಶಿವಣ್ಣ ವಿವದಾದ ಬಗ್ಗೆ ಮಾತನಾಡಿದ್ದಾರೆ. ನನ್ನನ್ನು ಆ ಕಾರ್ಯಕ್ರಮಕ್ಕೆ ಗೌರವದಿಂದ ಕರೆದಿದ್ದರು. ನಾನೂ ಗೌರವದಿಂದ ಹೋಗಿದ್ದೇನೆ. ಕಮಲ್ ಹಾಸನ್ ಹಿರಿಯ ಕಲಾವಿದರು. ಅವರಿಗೆ ಏನು ಮಾಡಬೇಕು ಎಂದು ಗೊತ್ತಿದೆ. ಅಂದು ಕಾರ್ಯಕ್ರಮದಲ್ಲಿ ಅವರು ಕನ್ನಡದ ಬಗ್ಗೆ ಹೇಳಿದ್ದು ನನಗೆ ಗೊತ್ತಾಗಿಲ್ಲ. ಈಚೆ  ಬಂದ ಮೇಲೆಯೇ ಅದು ವಿವಾದವಾಗಿದ್ದು.

ಕಮಲ್ ಹಾಸನ್ ಸಾಕಷ್ಟು ಕನ್ನಡ ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. ಕನ್ನಡದ ಬಗ್ಗೆ ಅವರಿಗೂ ಪ್ರೀತಿಯಿದೆ. ಇದೊಂದು ಚಿಕ್ಕ ವಿಚಾರ. ವಿವಾದ ಮಾಡಬೇಡಿ ಎಂದು ಮನವಿ ಮಾಡಿದ್ದಾರೆ. ಇನ್ನು, ಕನ್ನಡ ಅಂತ ಬಂದರೆ ನಾವು ಹೋರಾಟಕ್ಕೂ ಸಿದ್ಧ, ಸಾಯಲೂ ಸಿದ್ಧ ಎಂದು ಶಿವಣ್ಣ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಚೆನ್ನಾಗಿದ್ದೀರಾ ಅಂಕಲ್‌, ದರ್ಶನ್ ಪುತ್ರನ ಮುಗ್ಧತೆಗೆ ಶಿವಣ್ಣನ ಪ್ರೀತಿಯಾ ಮಾತು

ಮೂರನೇ ದಾಂಪತ್ಯಕ್ಕೂ ಅಂತ್ಯ ಹಾಡಿದ ಖ್ಯಾತ ನಟಿ ಮೀರಾ ವಾಸುದೇವನ್

BBK12: ಗಿಲ್ಲಿ ಮೇಲೆ ಕೇಸ್, ಮನೆಯಲ್ಲೂ ಕಿರಿಕ್, ಚಾರ್ಮ್ ಕಳೆದುಕೊಳ್ಳುತ್ತಿದ್ದಾರಾ ಗಿಲ್ಲಿ

BBK12: ರಕ್ಷಿತಾಳಂತಹ ಪಾಪದವರನ್ನು ಬೈತೀರಿ, ಅಶ್ವಿನಿ ಗೌಡಗೆ ಬೈಯಲು ನಿಮಗೆ ಧೈರ್ಯ ಇಲ್ವಾ ಕಿಚ್ಚ ಸುದೀಪ್

ಮುಂದಿನ ಸುದ್ದಿ
Show comments