ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಭೈರಾಗಿ ಸಿನಿಮಾದ ಪ್ರಿ ರಿಲೀಸ್ ಈವೆಂಟ್ ಚಾಮರಾಜನಗರದಲ್ಲಿ ನಡೆಯಲಿದೆ.
ಶಿವರಾಜ್ ಕುಮಾರ್ ಜೊತೆಗೆ ಡಾಲಿ ಧನಂಜಯ್, ಪೃಥ್ವಿ ಅಂಬರ್ ಪ್ರಮುಖ ಪಾತ್ರದಲ್ಲಿ ನಟಿಸಿರುವ ಈ ಸಿನಿಮಾದ ಹಾಡುಗಳು ಈಗಾಗಲೇ ಸೂಪರ್ ಹಿಟ್ ಆಗಿವೆ. ಜುಲೈ 1 ರಂದು ಸಿನಿಮಾ ಬಿಡುಗಡೆಯಾಗಲಿದೆ.
ಇದಕ್ಕೂ ಮೊದಲು ಅಂದರೆ ಜೂನ್ 25 ರಂದು ಚಾಮರಾಜನಗರದಲ್ಲಿ ಅದ್ಧೂರಿಯಾಗಿ ಪ್ರಿ ರಿಲೀಸ್ ಈವೆಂಟ್ ಕಾರ್ಯಕ್ರಮ ನಡೆಯಲಿದ್ದು, ಇಡೀ ಚಿತ್ರತಂಡವೇ ಅಲ್ಲಿ ಹಾಜರಿರಲಿದೆ.