Select Your Language

Notifications

webdunia
webdunia
webdunia
webdunia

ಚಿತ್ರರಂಗದ ಸಮಸ್ಯೆ ಬಗ್ಗೆ ಉಪಮುಖ್ಯಮಂತ್ರಿ ಬಳಿ ಹೇಳಿಕೊಂಡ ಶಿವರಾಜ್ ಕುಮಾರ್

ಶಿವರಾಜ್ ಕುಮಾರ್
ಬೆಂಗಳೂರು: ಕೊರೋನಾ, ಲಾಕ್ ಡೌನ್ ನಿಂದಾಗಿ ಚಿತ್ರರಂಗ ಎದುರಿಸುತ್ತಿರುವ ಸಮಸ್ಯೆ ಬಗ್ಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನೇತೃತ್ವದ ನಿಯೋಗ ಉಪ ಮುಖ್ಯಮಂತ್ರಿ ಡಾ. ಅಶ್ವತ್ಥ ನಾರಾಯಣ ಅವರನ್ನು ಭೇಟಿ ಮಾಡಿ ವಿವರಿಸಿದೆ.


ಎಲ್ಲಾ ಸರಿ ಹೋಗಿದ್ದರೆ ಶಿವರಾಜ್ ಕುಮಾರ್ ಮತ್ತು ಬಳಗ ಈಗಾಗಲೇ ಸಿಎಂ ಯಡಿಯೂರಪ್ಪನವರನ್ನು ಭೇಟಿಯಾಗಬೇಕಿತ್ತು. ಆದರೆ ಅಷ್ಟರಲ್ಲಾಗಲೇ ಸಿಎಂಗೆ ಕೊರೋನಾ ಬಂದಿದ್ದರಿಂದ ಆ ಭೇಟಿ ತಪ್ಪಿ ಹೋಗಿತ್ತು.

ಇದೀಗ ಉಪ ಮುಖ್ಯಮಂತ್ರಿಗಳನ್ನು ಭೇಟಿ ಮಾಡಿದ ಅಯೋಗ ಚಿತ್ರರಂಗದ ಸಮಸ್ಯೆ ಹಾಗೂ ಕಾರ್ಮಿಕರ ಸಮಸ್ಯೆ ಪರಿಹರಿಸಲು ಸರ್ಕಾರದ ಸಹಾಯ ಬೇಡಿದ್ದಾರೆ. ಈ ಸಂದರ್ಭದಲ್ಲಿ ಹೇಸರಘಟ್ಟದಲ್ಲಿ ಫಿಲಂ ಸಿಟಿ ನಿರ್ಮಾಣ ಮಾಡಲು ಎಲ್ಲಾ ಕ್ರಮ ಕೈಗೊಳ್ಳಲಾಗಿದೆ ಎಂದು ಉಪ ಮುಖ್ಯಮಂತ್ರಿಗಳು ಭರವಸೆ ನೀಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೊನಾ ಸೋಂಕಿಗೆ ಒಳಗಾದ ನಟಿ ನಿಕ್ಕಿ ಗಲ್ರಾನಿ