ಬೆಂಗಳೂರು: ಶಿವರಾಜ್ ಕುಮಾರ್ ಅಭಿನಯದ ಭಜರಂಗಿ 2 ಸಿನಿಮಾದ ರಿಲೀಸ್ ಡೇಟ್ ಫಿಕ್ಸ್ ಆಗಿದೆ. ಈ ಬಾರಿ ಗಣೇಶ ಹಬ್ಬಕ್ಕೆ ಭಜರಂಗಿ 2 ಸಿನಿಮಾ ರಿಲೀಸ್ ಆಗಲಿದೆ.
ಎ. ಹರ್ಷ ನಿರ್ದೇಶನದ ಭಜರಂಗಿ 2 ಸಿನಿಮಾ ಲಾಕ್ ಡೌನ್ ಬಳಿಕ ರಿಲೀಸ್ ಡೇಟ್ ಅನೌನ್ಸ್ ಆಗುತ್ತಿರುವ ಮೊದಲ ಸಿನಿಮಾ. ಎಲ್ಲಾ ಸರಿ ಹೋಗಿದ್ದರೆ ಇದು ಈಗಾಗಲೇ ಬಿಡುಗಡೆಯಾಗಬೇಕಿತ್ತು.
ಸೆಪ್ಟೆಂಬರ್ ವೇಳೆಗೆ ಥಿಯೇಟರ್ ಗಳಲ್ಲಿ ಶೇ.100 ಪ್ರೇಕ್ಷಕರಿಗೆ ಅವಕಾಶ ನೀಡುವ ಸಾಧ‍್ಯತೆಯಿದೆ. ಹೀಗಾಗಿ ಗಣೇಶ ಹಬ್ಬದ ಸಂದರ್ಭದಲ್ಲೇ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ.