Publish Date: Thu, 10 Aug 2023 (19:04 IST)
Updated Date: Thu, 10 Aug 2023 (19:08 IST)
ಚೆನ್ನೈ: ರಜನೀಕಾಂತ್ ನಾಯಕರಾಗಿರುವ ಜೈಲರ್ ಸಿನಿಮಾ ಇಂದು ಥಿಯೇಟರ್ ನಲ್ಲಿ ಬಿಡುಗಡೆಯಾಗಿದ್ದು, ಪ್ರೇಕ್ಷಕರಿಂದ ಭಾರೀ ಪ್ರತಿಕ್ರಿಯೆ ಕಂಡುಬಂದಿದೆ.
ಈ ಸಿನಿಮಾದಲ್ಲಿ ಕನ್ನಡ ನಟ ಶಿವರಾಜ್ ಕುಮಾರ್ ಕೂಡಾ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಶಿವಣ್ಣ ಸಿನಿಮಾದಲ್ಲಿ ಕಾಣಿಸಿಕೊಳ್ಳುವುದು ಕೆಲವೇ ನಿಮಿಷಗಳಾದರೂ ಅವರ ದೃಶ್ಯಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.
ಕನ್ನಡೇತರ ಪ್ರೇಕ್ಷಕರೂ ಶಿವಣ್ಣನ ಸ್ಕ್ರೀನ್ ಪ್ರೆಸೆನ್ಸ್ ಅದ್ಭುತ ಎಂದು ಕೊಂಡಾಡಿದ್ದಾರೆ. ಪ್ರಿ ಕ್ಲೈಮ್ಯಾಕ್ಸ್ ಗೆ ಮೊದಲು ಕೆಲವೇ ಕ್ಷಣ ಬಂದರೂ ಶಿವಣ್ಣ ನೆನಪಿನಲ್ಲುಳಿಯುವಂತೆ ಮಾಡುತ್ತಾರೆ ಎಂದು ಪ್ರೇಕ್ಷಕರು ಮೆಚ್ಚಿಕೊಂಡಿದ್ದಾರೆ.