Webdunia - Bharat's app for daily news and videos

Install App

‘ಜೀವ್ನಾನೇ ನಾಟ್ಕ ಸಾಮಿ’ ಟೀಸರ್ ಗೆ ಕರುನಾಡ ಚಕ್ರವರ್ತಿ ಶಿವಣ್ಣ ಸಾಥ್

Webdunia
ಗುರುವಾರ, 24 ಡಿಸೆಂಬರ್ 2020 (09:29 IST)
ಬೆಂಗಳೂರು: ಹೊಸಬರ ಸಿನಿಮಾಗಳಿಗೆ ಸ್ಟಾರ್ ನಟರು ಸಾಥ್ ಕೊಡುತ್ತಿರುವುದು ಇತ್ತೀಚೆಗೆ ಟ್ರೆಂಡ್ ಆಗುತ್ತಿದೆ. ಇದೀಗ ಹೊಸಮುಖಗಳ ಪ್ರಯತ್ನಕ್ಕೆ ನಟ ಶಿವರಾಜ್ ಕುಮಾರ್ ಸಾಥ್ ನೀಡಿದ್ದಾರೆ.


ಆರ್ಯ ಎಂಟರ್ ಟೈನ್ಮೆಂಟ್ ನಿರ್ಮಾಣದಲ್ಲಿ ಮೂಡಿಬಂದಿರುವ ರಾಜು ಭಂಡಾರಿ ರಾಜಾವರ್ತ ನಿರ್ದೇಶನದ ‘ಜೀವ್ನಾನೇ ನಾಟ್ಕ ಸಾಮಿ’ ಸಿನಿಮಾದ ಟೀಸರ್ ನ್ನು ಕರುನಾಡ ಚಕ್ರವರ್ತಿ ಶಿವರಾಜ್ ಕುಮಾರ್ ಲಾಂಚ್ ಮಾಡಿ ಚಿತ್ರ ತಂಡಕ್ಕೆ ಶುಭ ಹಾರೈಸಿದ್ದಾರೆ. ಬಿಡುಗಡೆಗೂ ಮೊದಲೇ ಹಲವು ಅಂತಾರಾಷ್ಟ್ರೀಯ ಸಿನಿಮೋತ್ಸವಗಳಲ್ಲಿ ಸ್ಪರ್ಧಿಸಿ ಪ್ರಶಸ್ತಿ ಪಡೆದಿರುವ ಈ ಸಿನಿಮಾದ ಟೀಸರ್ ಗೆ ಯೂ ಟ್ಯೂಬ್ ನಲ್ಲಿ ಉತ್ತಮ ಪ್ರತಿಕ್ರಿಯೆ ಬಂದಿದೆ.

‘ಕನ್ನಡತಿ’ ಧಾರವಾಹಿ ಖ್ಯಾತಿಯ ಕಿರಣ್ ರಾಜ್, ಸರಿಗಮಪ ರಿಯಾಲಿಟಿ ಶೋ ಖ್ಯಾತಿಯ ಶ್ರೀ ಹರ್ಷ ಮುಂತಾದವರು ಪ್ರಧಾನ ಭೂಮಿಕೆಯಲ್ಲಿರುವ ಈ ಸಿನಿಮಾದ ಟೀಸರ್ ನೋಡಿದರೆ ಇದು ಬಣ್ಣದ ಲೋಕದ ಬದುಕಿನ ಕತೆ ಎಂಬ ಸುಳಿವು ಸಿಗುತ್ತದೆ. ಸದ್ಯಕ್ಕೆ ಟೀಸರ್ ಬಿಡುಗಡೆಯಾಗಿದ್ದು, ಮುಂದಿನ ವರ್ಷಕ್ಕೆ ಚಿತ್ರ ಬಿಡುಗಡೆಯಾಗುವ ಸಾಧ‍್ಯತೆಯಿದೆ. ಹೊಸಬರ ಈ ಪ್ರಯತ್ನ ಯಶಸ್ವಿಯಾಗಲೇಂದು ಶಿವಣ್ಣ ಕೂಡಾ ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments