ಬೆಂಗಳೂರು: ತೆಲುಗಿನ ರವಿತೇಜ ನಾಯಕರಾಗಿರುವ ಪ್ಯಾನ್ ಇಂಡಿಯಾ ಸಿನಿಮಾಗೆ ಶಿವರಾಜ್ ಕುಮಾರ್ ಸಾಥ್ ನೀಡುತ್ತಿದ್ದಾರೆ.
ರವಿತೇಜ ನಾಯಕರಾಗಿರುವ ಪ್ಯಾನ್ ಇಂಡಿಯಾ ಸಿನಿಮಾ ಟೈಗರ್ ನಾಗೇಶ್ವರ್ ರಾವ್ ಸಿನಿಮಾದ ಫಸ್ಟ್ ಲುಕ್ ಗೆ ಶಿವಣ್ಣ ಧ್ವನಿ ನೀಡಿದ್ದಾರೆ. ಈ ವಿಚಾರವನ್ನು ಚಿತ್ರತಂಡ ಹಂಚಿಕೊಂಡಿದೆ.
ಕನ್ನಡದಲ್ಲೂ ಸಿನಿಮಾ ಬಿಡುಗಡೆಯಾಗುತ್ತಿದೆ. ಹೀಗಾಗಿ ಕನ್ನಡದಲ್ಲಿ ಶಿವಣ್ಣ ಧ್ವನಿ ನೀಡಿದ್ದಾರೆ. ಈ ಸಿನಿಮಾದ ಫಸ್ಟ್ ಲುಕ್ ಟೀಸರ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ.