ಬೆಂಗಳೂರು: ಗೀತಾ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂದು ಮಧು ಬಂಗಾರಪ್ಪ ಹೇಳಿಕೆ ನೀಡಿದ ಬೆನ್ನಲ್ಲೇ ನಟ ಶಿವರಾಜ್ ಕುಮಾರ್ ಕಾಂಗ್ರೆಸ್ ನಾಯಕ ಡಿಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದಾರೆ.
ಆದರೆ ಈ ಭೇಟಿ ಬಗ್ಗೆ ಮಾಧ್ಯಮಗಳು ಪ್ರತಿಕ್ರಿಯಿಸಿದಾಗ ಇದೊಂದು ಸೌಹಾರ್ದಯುತ ಭೇಟಿಯಾಗಿತ್ತು. ಕೆಲವು ವೈಯಕ್ತಿಕ ಕಾರಣಗಳನ್ನು ಚರ್ಚೆ ಮಾಡಲು ಶಿವರಾಜ್ ಕುಮಾರ್ ಮನೆಗೆ ಬಂದಿದ್ದರು. ಅದರ ವಿವರಗಳನ್ನು ಹೇಳಲಾಗದು ಎಂದು ಡಿಕೆಶಿ ಹೇಳಿದ್ದಾರೆ.
ಇನ್ನೊಂದೆಡೆ, ಶಿವರಾಜ್ ಕುಮಾರ್ ಇದೇ ರೀತಿಯ ಹೇಳಿಕೆ ನೀಡಿದ್ದಾರೆ. ಅಲ್ಲದೆ, ಮಧು ಯಾವ ಪಕ್ಷಕ್ಕಾದರೂ ಸೇರಿಕೊಳ್ಳಲಿ. ಅದರ ಬಗ್ಗೆ ನಾನೇನು ಹೇಳಲ್ಲ. ಒಟ್ನಲ್ಲಿ ಒಳ್ಳೆಯದಾದರೆ ಸಾಕು ಎಂದಷ್ಟೇ ಹೇಳಿದ್ದಾರೆ. ಇನ್ನು, ಕೆಲವು ವೈಯಕ್ತಿಕ ವಿಚಾರಗಳಿದ್ದವು. ಅದನ್ನು ಚರ್ಚೆ ಮಾಡಲು ಡಿಕೆಶಿ ಭೇಟಿ ಮಾಡಿದ್ದೇನೆ ಎಂದು ಶಿವಣ್ಣ ಹೇಳಿದ್ದಾರೆ. ಆದರೆ ಗೀತಾ ಶಿವರಾಜ್ ಕುಮಾರ್ ಕಾಂಗ್ರೆಸ್ ಸೇರ್ಪಡೆ ವದಂತಿ ಬೆನ್ನಲ್ಲೇ ಇವರಿಬ್ಬರ ಭೇಟಿ ನಡೆದಿರುವುದು ಎಲ್ಲರ ಕುತೂಹಲಕ್ಕೆ ಕಾರಣವಾಗಿದೆ.